BengaluruCinemaHealth

ಹಿರಿಯ ನಟಿ ಲೀಲಾವತಿ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಕಂಬನಿ

ಬೆಂಗಳೂರು; ಕನ್ನಡದ ಹಿರಿಯ ನಟಿ ಲೀಲಾವತಿ ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಕಂಬನಿ ಮಿಡಿದಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಸಿದ್ದರಾಮಯ್ಯ ಅವರು ಲೀಲಾವತಿ ನಿವಾಸಕ್ಕೆ ತೆರಳಿ ಆರೋಗ್ಯ ವಿಚಾರಿಸಿದ್ದರು. ಇಂದು ಸಂಜೆ ಲೀಲಾವತಿ ನಿಧನರಾಗಿದ್ದು, ಅವರ ಅಗಲಿಕೆ ನೋವುಂಟು ಮಾಡಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಈ ಬಗ್ಗೆ ಅವರು ಟ್ವೀಟ್‌ ಮಾಡಿದ್ದಾರೆ.

ಸಿದ್ದರಾಮಯ್ಯ ಅವರ ಟ್ವೀಟ್‌ನಲ್ಲೇನಿದೆ..?

ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಅವರ ಅಗಲಿಕೆಯ ಸುದ್ದಿ ನೋವುಂಟುಮಾಡಿದೆ. ಕಳೆದ ವಾರವಷ್ಟೇ ಅವರು ಅನಾರೋಗ್ಯಕ್ಕೀಡಾದ ವಿಚಾರ ತಿಳಿದು ಅವರ ಮನೆಗೆ ಭೇಟಿನೀಡಿ ಆರೋಗ್ಯ ವಿಚಾರಿಸಿ ಪುತ್ರ ವಿನೋದ್ ರಾಜ್ ಅವರೊಂದಿಗೆ ಮಾತನಾಡಿದ್ದೆ.

ಹಲವು ದಶಕಗಳ ಕಾಲ ತಮ್ಮ‌ ಮನೋಜ್ಞ ಅಭಿನಯದ ಮೂಲಕ ಪ್ರೇಕ್ಷಕರನ್ನು ರಂಜಿಸಿದ್ದ ಲೀಲಾವತಿ ಅವರು ಗುಣಮುಖರಾಗಿ ಇನ್ನಷ್ಟು ಕಾಲ ನಮ್ಮ ನಡುವೆ ಇರುತ್ತಾರೆಂಬ ನನ್ನ ನಂಬಿಕೆ ಹುಸಿಯಾಗಿದೆ.
ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬ ವರ್ಗಕ್ಕೆ ಈ ದುಃಖವನ್ನು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ.

Share Post