Cinema

ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ಗೆ ಇಂದು ಹುಟ್ಟು ಹಬ್ಬದ ಸಂಭ್ರಮ

ಬೆಂಗಳೂರು : ಕನ್ನಡ ಚಿತ್ರರಂಗದ ಡಿ ಬಾಸ್‌ ಎಂದೇ ಖ್ಯಾತಿ ಪಡೆದಿರುವ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅವರಿಗೆ ಇಂದು 45ನೇ ಹುಟ್ಟು ಹಬ್ಬದ ಸಂಭ್ರಮ.

ಕೋವಿಡ್‌ ಮತ್ತು ಪುನೀತ್ ಅವರ ಅಗಲಿಕೆಯ ಕಾರಣದಿಂದ ದರ್ಶನ್‌ ಅವರು ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿಲ್ಲ. ಆದರೆ ಸಾಮಾಜಿಕ ಜಾಲತಾಣಗಳಲ್ಲಿ ಅಭಿಮಾನಿಗಳು ಮತ್ತು ಸಿನಿ ಗಣ್ಯರು ದರ್ಶನ್‌ ಅವರಿಗೆ ಶುಭ ಕೋರುತ್ತಿದ್ದಾರೆ.

ಇನ್ನು ಹುಟ್ಟು ಹಬ್ಬದ ಪ್ರಯುಕ್ತ ದರ್ಶನ್‌ ಅವರ ನೂತನ ಸಿನಿಮಾ ಕ್ರಾಂತಿ ಚಿತ್ರತಂಡದಿಂದ ಟೀಸರ್‌ ಒಂದು ಬಿಡುಗಡೆಯಾಗಿದೆ. ಅಭಿಮಾನಿಗಳಿಂದ ಉತ್ತಮ ರೆಸ್ಪಾನ್ಸ್‌ ಸಿಕ್ಕಿದೆ.

ಇದೇ ವೇಳೆ ದರ್ಶನ್‌ ಅವರ ಮೊದಲ ಸಿನಿಮಾ ಮೆಜೆಸ್ಟಿಕ್‌ ಕೂಡ ರೀ ರಿಲೀಸ್‌ ಆಗಿದ್ದು ಜನರಿಂದ ಉತ್ತಮ ರೆಸ್ಪಾನ್ಸ್‌ ದೊರಕಿದೆ.

ಅಭಿಮಾನಿಗಳಿಗೆ ಮನೆ ಹತ್ತಿರ ಬರದಂತೆ ಮನವಿ ಮಾಡಿಕೊಂಡಿರುವ ದರ್ಶನ್‌ ಅವರ ಟ್ವೀಟ್‌ ಈ ರೀತಿ ಇದೆ.

ಪ್ರೀತಿಯ ಅಭಿಮಾನಿಗಳಲ್ಲಿ ನಿಮ್ಮ ದಾಸ ದರ್ಶನ್ ತೂಗುದೀಪ ಮಾಡುವ ವಿನಂತಿ.
2021ರ ಕರಾಳ ದಿನಗಳು ಮತ್ತೆ ಮರುಕಳಿಸದಿರಲಿ, ಕೋವಿಡ್ ಇಂದ ಸಂಪೂರ್ಣವಾಗಿ ನಮ್ಮ ಜನತೆ ಚೇತರಿಸಿಕೊಳ್ಳಲಿ ಎಂಬ ಕಾರಣದಿಂದ ನನ್ನ ಹುಟ್ಟುಹಬ್ಬವನ್ನು ಈ ಬಾರಿಯೂ ಸಹ ಸರಳವಾಗಿರಲೆಂದು ನಿರ್ಧರಿಸಿದ್ದೇನೆ. ಈ ಬಾರಿಯೂ ಬೆಂಗಳೂರಿನಲ್ಲಿ ನಾನು ಈ ಸಮಯದಲ್ಲಿರುವುದಿಲ್ಲ.

 

Share Post