ಶೂಟಿಂಗ್ ವೇಳೆ ದೀಪಿಕಾ ಪಡುಕೋಣೆಗೆ ಅನಾರೋಗ್ಯ; ಆಸ್ಪತ್ರೆಗೆ ದಾಖಲು
ಹೈದರಾಬಾದ್; ಹೈದರಾಬಾದ್‌ನಲ್ಲಿ ಶೂಟಿಂಗ್‌ನಲ್ಲಿ ಪಾಲ್ಗೊಂಡಿದ್ದ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಅನಾರೋಗ್ಯಕ್ಕೀಡಾಗಿದ್ದಾರೆ. ಶೂಟಿಂಗ್ ವೇಳೆ ಅವರು ಸುಸ್ತಿನಿಂದ ಕುಸಿದುಬಿದ್ದರು ಎಂದು ಹೇಳಲಾಗುತ್ತಿದೆ. ದೀಪಿಕಾ ಅವರನ್ನು ಹೈದರಾಬಾದ್‌ನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಎರಡು ದಿನದ ಹಿಂದೆಯೇ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಆದ್ರೆ ಅವರ ಆರೋಗ್ಯ ಪರಿಸ್ಥಿತಿಯ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ದೀಪಿಕಾ ಆರೋಗ್ಯ ಕೈ ಕೊಡುತ್ತಿರುವುದು ಇದೇ ಮೊದಲಲ್ಲ. ಆಗಾಗ್ಗೆ ಆಸ್ಪತ್ರೆಗೆ ದಾಖಲಾಗುತ್ತಲೇ ಇರುತ್ತಾರೆ. ಈ ಬಾರಿಯೂ ಶೂಟಿಂಗ್‌ನಲ್ಲೇ ಸುಸ್ತಾಗಿ ಕೂತಿದ್ದಾರೆ. ಸದ್ಯ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಹಲವು ಟೆಸ್ಟ್‌ಗಳನ್ನು ಮಾಡಲಾಗಿದೆ.