Cinema

ಎಂಇಎಸ್ ಉದ್ಧಟತನಕ್ಕೆ ನಟ ಜಗ್ಗೇಶ್‌ ಆಕ್ರೋಶ

ಬೆಂಗಳೂರು: ಮಹಾರಾಷ್ಟ್ರದ ಪುಂಡರು ಮತ್ತೆ ತಮ್ಮ ಉದ್ಧಟತನ ಮೆರೆದಿದ್ದಾರೆ. ಕನ್ನಡ ಧ್ವಜಕ್ಕೆ ಬೆಂಕಿ ಇಟ್ಟು ತೀವ್ರ ಆಕ್ರೋಶ ವ್ಯಕ್ತವಾಗಿದೆ. ಇದಕ್ಕೆ ನಟ ಜಗ್ಗೇಶ್ ಸಹ ಸಾಮಾಜಿಕ ಜಾಲತಾಣದ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದು, ಘಟನೆ ವಿರುದ್ಧ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗೆ ಒತ್ತಾಯಿಸಿದ್ದಾರೆ.ಅವರು ತಮ್ಮ ಟ್ವಿಟ್ಟರ್‌ ಮೂಲಕ ಆಕ್ರೋಶ ಹೊರಹಾಕಿದ್ದಾರೆ.
ಕನ್ನಡ ಬಾವುಟ ಅಪಮಾನಿಸಿದವರ ಮೇಲೆ ಕಾನೂನು ಕ್ರಮಕ್ಕೆ ಒತ್ತಾಯ. ಕನ್ನಡಪರ ಈ ವಿಷಯಕ್ಕೆ ಹೋರಾಟ ಮಾಡಿದ ಕನ್ನಡ ಸೈನಿಕರ ದಯಮಾಡಿ ಬಿಡುಗಡೆಗೊಳಿಸಿ” ಎಂದು ಮುಖ್ಯ ಮಂತ್ರಿಗಳು ಬಸವರಾಜ ಬೊಮ್ಮಾಯಿ, ಗೃಹಮಂತ್ರಿಗಳು ಆರಗ ಜ್ಞಾನೇಂದ್ರ ಅವರಿಗೆ ಟ್ಯಾಗ್ ಮಾಡಿ ಮನವಿ ಮಾಡಿದ್ದಾರೆ. ”ಕರ್ನಾಟಕದಲ್ಲಿ ಕನ್ನಡ ಭಾಷೆ ಸಾರ್ವಭೌಮ” ಎಂದು ಜಗ್ಗೇಶ್ ಹೇಳಿದ್ದಾರೆ.
ಬೆಳಗಾವಿ ಅಧಿವೇಶನ ಆರಂಭವಾಗುತ್ತಿದ್ದಂತೆ ಎಂಇಎಸ್ ತನ್ನ ಉದ್ಧಟತನ ಪ್ರದರ್ಶಿಸಲು ಆರಂಭಿಸಿ ಮಹಾಮೇಳಾವ್ ಆಯೋಜನೆ ಮಾಡಿತ್ತು. ಇದಕ್ಕೆ ಪೊಲೀಸರಿಂದ ಪರವಾನಗಿ ಪಡೆದಿರಲಿಲ್ಲ. ಬೆಳಗಾವಿಯ ವ್ಯಾಕ್ಸಿನ್ ಡಿಪೋ ಬಳಿ ರಸ್ತೆಯ ಮೇಲೆ ಪೆಂಡಾಲ್ ಹಾಕಿ ಉದ್ಧಟತನ ಪ್ರದರ್ಶನ ಮಾಡಿದರು.

Share Post