CinemaHealth

ಹಿರಿಯ ನಟ ಲೋಹಿತಾಶ್ವ ನಿಧನ; ನಾಳೆ ಅಂತ್ಯಕ್ರಿಯೆ

ಬೆಂಗಳೂರು; ಸ್ಯಾಂಡಲ್‌ವುಡ್‌ ಹಿರಿಯ ನಟ ಲೋಹಿತಾಶ್ವ ಇಹಲೋಕ ತ್ಯಜಿಸಿದ್ದಾರೆ. ಕೆಲ ದಿನಗಳಿಂದ ಅನಾರೋಗ್ಯಕ್ಕೀಡಾಗಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಲೋಹಿತಾಶ್ವ ಇಂದು ಕೊನೆಯುಸಿರೆಳೆದಿದ್ದಾರೆ.

ಲೋಹಿತಾಶ್ವ ಅವರಿಗೆ 80 ವರ್ಷ ವಯಸ್ಸಾಗಿದ್ದು, ಅವರಿಗೆ ಇನ್ಫೆಕ್ಷನ್ ಜಾಸ್ತಿಯಾಗಿ ಆಸ್ಪತ್ರೆ ಸೇರಿದ್ದರು. ಗುಣಮುಖರಾಗುವ ಸಮಯದಲ್ಲೇ ಹೃದಯಾಘಾತ ಸಂಭವಿಸಿತ್ತು. ಹೀಗಾಗಿ ಐಸಿಯುಗೆ ಶಿಫ್ಟ್‌ ಮಾಡಲಾಗಿತ್ತು. ಒಂದು ತಿಂಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಸಂಜೆ ಕೊನೆಯುಸಿರೆಳೆದಿದ್ದಾರೆ.

ಇಂದು ರಾತ್ರಿ 7.30ರ ನಂತರ ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ನಿವಾಸಕ್ಕೆ ಲೋಹಿತಾಶ್ವ ಅವರ ಪಾರ್ಥೀವ ಶರೀರ ತರಾಲಾಗುತ್ತದೆ. ರಾತ್ರಿ 11 ಗಂಟೆವರೆಗೂ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ. ನಂತರ ನಾಳೆ ಅವರ ಹುಟ್ಟೂರಿನಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

Share Post