Cinema

ನೀಲಕಂಠ ನಟಿಗೆ ಸೀಮಂತ ಸಂಭ್ರಮ; ತಾಯಿಯಾಗ್ತಿದ್ದಾರೆ ನಮಿತಾ

ಮುಂಬೈ; ದಕ್ಷಿಣ ಭಾರತದ ಹಲವು ಭಾಷೆಗಳ ಚಿತ್ರನಟಿ ನಮಿತಾ, ಸದ್ಯ ತಾಯ್ತನದ ಖುಷಿಯಲ್ಲಿದ್ದಾರೆ. ಇತ್ತೀಚೆಗಷ್ಟೇ ನಟಿ ನಮಿತಾ ಸೀಮಂತದ ಶಾಸ್ತ್ರದ ಸಂಭ್ರಮ ಅದ್ದೂರಿಯಾಗಿ ನೆರವೇರಿದೆ. ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿವೆ. ತೆಲುಗು, ತಮಿಳು ಸಿನಿಮಾಗಳ ಜತೆ ಕನ್ನಡದ `ನೀಲಕಂಠ’ ಮತ್ತು `ಹೂ’ ಚಿತ್ರದಲ್ಲಿ ರವಿಚಂದ್ರನ್ ಜತೆ ನಮಿತಾ ಡ್ಯುಯೆಟ್ ಹಾಡಿದ್ದರು. ಹಾಗಾಗಿ ಕನ್ನಡ ಸಿನಿಪ್ರೇಕ್ಷಕರ ಮನದಲ್ಲಿ ನಮಿತಾ ಸ್ಥಾನ ಗಿಟ್ಟಿಸಿಕೊಂಡರು. ಚಿತ್ರರಂಗ ಜತೆ ರಾಜಕೀಯ ರಂಗದಲ್ಲೂ ನಮಿತಾ ಗುರುತಿಸಿಕೊಂಡಿದ್ದಾರೆ.

2017ರಲ್ಲಿ ಉದ್ಯಮಿ ವೀರೇಂದ್ರ ಚೌಧರಿ ಜತೆ ಹಸೆಮಣೆ ಏರಿದ್ದರು. ಇತ್ತೀಚೆಗೆ ತಮ್ಮ ಹುಟ್ಟುಹಬ್ಬದಂದು ತಾವು ತಾಯಿಯಾಗುತ್ತಿರುವ ವಿಚಾರವನ್ನು ನಮಿತಾ ಹೇಳಿಕೊಂಡಿದ್ದರು. ಈಗ ಸೀಮಂತ ಶಾಸ್ತ್ರದ ಸಂಭ್ರಮದಲ್ಲಿದ್ದಾರೆ. ಸೀಮಂತದಲ್ಲಿ ತುಂಬಾ ಮುದ್ದಾಗಿ ಕಾಣಿಸಿಕೊಂಡಿದ್ದಾರೆ. ಇತ್ತೀಚೆಗೆ ನಟಿ ನಮಿತಾ ಆಪ್ತರು, ಕುಟುಂಬಸ್ಥರ ಸಮ್ಮುಖದಲ್ಲಿ ಸೀಮಂತ ಶಾಸ್ತ್ರವನ್ನು ಅದ್ದೂರಿಯಾಗಿ ಆಚರಿಸಿಕೊಂಡಿದ್ದಾರೆ. ನಮಿತಾ ಅವರ ಆಪ್ತ ಚಿತ್ರರಂಗದ ಸ್ನೇಹಿತರು ಭಾಗಿಯಾಗಿ ಶುಭಹಾರೈಸಿದ್ದಾರೆ.

Share Post