BengaluruCinema

ಪುನೀತ್‌ ರಾಜ್‌ಕುಮಾರ್‌ ಅವರಿಗೆ ಕರ್ನಾಟಕ ರತ್ನ ಪ್ರದಾನ; ಭಾವುಕರಾದ ಅಶ್ವಿನಿ

ಬೆಂಗಳೂರು; ಮಳೆಯ ನಡುವೆಯೇ ಪುನೀತ್‌ ರಾಜ್‌ಕುಮಾರ್‌ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು. ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ಅವರು ಸಿಎಂ ಬಸವರಾಜ ಬೊಮ್ಮಾಯಿ ಅವರಿಂದ ಪ್ರಶಸ್ತಿ ಸ್ವೀಕಾರ ಮಾಡಿದರು.

ವಿಧಾನಸೌಧದ ಮೆಟ್ಟಿಲುಗಳ ಮೇಲೆ ಈ ಸಮಾರಂಭ ಆಯೋಜಿಸಲಾಗಿತ್ತು. ಈ ವೇಳೆ ಮಳೆ ಬಂತು. ಇದರ ನಡುವೆಯೇ ಪ್ರಶಸ್ತಿ ಪ್ರದಾನ ನಡೆಯಿತು. ಪ್ರಶಸ್ತಿ ಸ್ವೀಕರಿಸಿದ ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ಭಾವುಕರಾದರು. ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ರಜಿನಿ ಕಾಂತ್‌, ಜ್ಯೂನಿಯರ್‌ ಎನ್‌ಟಿಆರ್‌ ಸೇರಿದಂತೆ ಹಲವು ಗಣ್ಯರು ಹಾಜರಿದ್ದರು.

Share Post