Cinema

ಲತಾ ಮಂಗೇಶ್ಕರ್‌ ನಿಧನಕ್ಕೆ ಪ್ರಧಾನಿ ಮೋದಿ ಕಂಬನಿ

ನವದೆಹಲಿ: ಗಾನ ಕೋಗಿಲೆ ಲತಾ ಮಂಗೇಶ್ಕರ್‌ ಅವರ ನಿಧನಕ್ಕೆ ಇಡೀ ದೇಶವೇ ಕಂಬನಿ ಮಿಡಿಯತ್ತಿದೆ. ಲತಾ ಮಂಗೇಶ್ಕರ್‌ ಅವರ ನಿಧನದ ಸುದ್ದಿ ಕೇಳಿತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಕೂಡಾ ಭಾವುಕ ರಾಗಿದ್ದಾರೆ. ಅವರು ಈ ಬಗ್ಗೆ ಸರಣಿ ಟ್ವೀಟ್‌ ಮಾಡಿದ್ದಾರೆ. ಅವರೊಂದಿಗಿನ ಒಡನಾಟವನ್ನು ನೆನಪಿಸಿಕೊಂಡಿದ್ದಾರೆ. ನರೇಂದ್ರ ಮೋದಿವರ ಸರಣಿ ಟ್ವೀಟ್‌ಗಳ ಸಾರಾಂಶ ಇಲ್ಲಿದೆ.

ʻನಾನು ಹೇಳಲಾಗದಷ್ಟು ದುಃಖಿತನಾಗಿದ್ದೇನೆ. ದಯೆ ಮತ್ತು ಕಾಳಜಿಯುಳ್ಳ ಲತಾ ದೀದಿ ನಮ್ಮನ್ನು ಅಗಲಿದ್ದಾರೆ. ಅವರ ಅಗಲಿಕೆ  ನಮ್ಮ ದೇಶಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಮಧುರ ಧ್ವನಿಯು ಜನರನ್ನು ಮಂತ್ರಮುಗ್ಧಗೊಳಿಸುವ ಅಪ್ರತಿಮ ಸಾಮರ್ಥ್ಯವನ್ನು ಹೊಂದಿತ್ತು.ʼ

ʻಲತಾ ದೀದಿ ಅವರ ಹಾಡುಗಳು ಎಲ್ಲರನ್ನೂ ಮಂತ್ರಮುಗ್ಧಗೊಳಿಸುತ್ತಿದ್ದವು. ದಶಕಗಳ ಕಾಲ ಭಾರತೀಯ ಚಲನಚಿತ್ರ ಪ್ರಪಂಚದ ಸ್ಥಿತ್ಯಂತರಗಳಿಗೆ ಅವರು ನಿಕಟವಾದ ಸಾಕ್ಷಿಯಾಗಿದ್ದರು. ಚಲನಚಿತ್ರಗಳ ಆಚೆಗೆ, ಅವರು ಯಾವಾಗಲೂ ಭಾರತದ ಬೆಳವಣಿಗೆಯ ಬಗ್ಗೆ ಉತ್ಸುಕರಾಗಿದ್ದರು. ಅವರುಳು ಯಾವಾಗಲೂ ಬಲಿಷ್ಠ ಮತ್ತು ಅಭಿವೃದ್ಧಿ ಹೊಂದಿದ ಭಾರತವನ್ನು ನೋಡಲು ಬಯಸುತ್ತಿದ್ದರು.ʼ

ʻಲತಾ ದೀದಿಯವರಿಂದ ನಾನು ಯಾವಾಗಲೂ ಅಪಾರ ಪ್ರೀತಿಯನ್ನು ಪಡೆದಿದ್ದೇನೆ. ಅದು ನನಗೆ ಗೌರವವೆಂದು ಪರಿಗಣಿಸುತ್ತೇನೆ. ಅವರೊಂದಿಗಿನ ನನ್ನ ಒಡನಾಟಗಳು ಅವಿಸ್ಮರಣೀಯವಾಗಿ ಉಳಿಯುತ್ತವೆ. ಲತಾ ದೀದಿ ಅವರ ನಿಧನಕ್ಕೆ ನಾನು ಭಾರತೀಯರೊಂದಿಗೆ ದುಃಖಿಸುತ್ತೇನೆ. ಅವರ ಕುಟುಂಬದವರೊಂದಿಗೆ ಮಾತನಾಡಿ ಸಾಂತ್ವನ ಹೇಳುತ್ತೇನೆ. ಓಂ ಶಾಂತಿ.ʼ

 

Share Post