ಲತಾ ಮಂಗೇಶ್ಕರ್ ಆರೋಗ್ಯ ಸ್ಥಿತಿ ಗಂಭೀರ: ಐಸಿಯುನಲ್ಲಿ ಮುಂದುವರಿದ ಚಿಕಿತ್ಸೆ
ಮುಂಬೈ: ಹಿರಿಯ ಗಾಯಕಿ ಲತಾ ಮಂಗೇಶ್ಕರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಬ್ರೀಚ್ ಕ್ಯಾಂಡಿ ವೈದ್ಯಕೀಯ ತಜ್ಞರು ಹೇಳಿದ್ದಾರೆ. ಅನಾರೋಗ್ಯದ ಕಾರಣ ಅವರನ್ನು ಕಳೆದ ಜನವರಿ 8ರಂದು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ಐಸಿಯು ವಾರ್ಡ್‌ಗೆ ದಾಖಲಿಸಲಾಗಿತ್ತು. ಅಂದಿನಿಂದ ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸಿಬ್ಬಂದಿ ಲತಾ ಮಂಗೇಶ್ಕರ್ ಅವರ ಆರೋಗ್ಯ ಸುಧಾರಿಸಲು ಸತತ ಪ್ರಯತ್ನಗಳನ್ನು ಮಾಡಿದ್ದಾರೆ.
ಗಾಯಕಿ ಲತಾ ಮಂಗೇಶ್ಕರ್ ಅವರ ಸ್ಥಿತಿ ಮತ್ತೊಮ್ಮೆ ಗಂಭೀರವಾಗಿದೆ. ನಾವು ಅವರಿಗೆ ವೆಂಟಿಲೇಟರ್‌ನಲ್ಲಿರಿಸಿ ಚಿಕಿತ್ಸೆ ನೀಡುತ್ತಿದ್ದೇವೆ, ”ಎಂದು ಡಾ. ಪ್ರತೀತ್ ಸಂಧಾನಿ ಹೇಳಿದ್ರು. ವಾರದ ಹಿಂದೆ ವೆಂಟಿಲೇಟರ್ ಇಲ್ಲದೆ ಚಿಕಿತ್ಸೆ ನೀಡಲಾಗಿತ್ತು ಎಂದಿದ್ದರೆ.
ಆಸ್ಪತ್ರೆಗೆ ದಾಖಲಾದ ಕೆಲವು ದಿನಗಳ ನಂತರ ಅವರು ಕೋವಿಡ್‌ನಿಂದ ಚೇತರಿಸಿಕೊಂಡಿದ್ದರೂ ಕೂಡ ನ್ಯುಮೋನಿಯಾದಿಂದ ಬಳಲುತ್ತಿದ್ದರು. ಒಂದು ವಾರದ ಹಿಂದೆ ವೈದ್ಯರು ಯಾವುದೇ ಸಮಸ್ಯೆ ಇಲ್ಲ ಮತ್ತು ಆರೋಗ್ಯ ಸ್ಥಿತಿ ಸುಧಾರಿಸಿದೆ ಎಂದು ಬಹಿರಂಗಪಡಿಸಿದರು. ಚೇತರಿಸಿಕೊಳ್ಳುವ ಹಂತದಲ್ಲಿರುವಾಗಲೇ ಅವರ ಆರೋಗ್ಯ ಮತ್ತೊಮ್ಮೆ ವಿಷಮ ಪರಿಸ್ಥಿತಿ ತಲುಪಿದೆ.
ಲತಾ ಮಂಗೇಶ್ಕರ್ ಸಂಪೂರ್ಣ ಗುಣಮುಖರಾಗಿ ಬೇಗ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿ ಎಂದು ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ದೇವರಲ್ಲಿ ಪ್ರಾರ್ಥನೆ ಮಾಡಿದ್ದಾರೆ.