CinemaNational

ಲತಾ ಮಂಗೇಶ್ಕರ್‌ ಅವರಿಗೆ ಕೊರೊನಾ ಪಾಸಿಟಿವ್:‌ ಆಸ್ಪತ್ರೆಗೆ ದಾಖಲು

ಮುಂಬೈ: ಭಾರತದ ಸುಪ್ರಸಿದ್ದ ಕಂಚಿನ ಕಂಠದ ಗಾಯಕಿ ಲತಾ ಮಂಗೇಶ್ಕರ್‌ ಅವರಿಗೆ ಕೊರೊನಾ ಸೋಂಕು ತಗುಲಿದೆ. ಅವರ ಆರೋಗ್ಯ ಗಂಭೀರವಾಗಿರುವುದರಿಂದ ಮುಂಬೈನ ಬ್ರೀಚ್‌ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿದೆ. ತೀವ್ರ ನಿಗಾ ಘಟಕದಲ್ಲಿ ಲತಾ ಮಂಗೇಶ್ಕರ್‌ ಅವರಿಗೆ ಚಿಕಿತ್ಸೆ ನೀಡಲಾಗ್ತಿದೆ. ಅವರ ಆರೋಗ್ಯ ಪರಿಸ್ಥಿತಿ ಬಗ್ಗೆ ವೈದ್ಯರು ಇನ್ನೂ ಯಾವುದೇ ವರದಿ ನೀಡಿಲ್ಲ. ಸಾವಿರಾರು ಹಾಡುಗಳನ್ನು ಹಾಡಿ ಜನರ ಮನಗೆದ್ದಿರುವ ಲತಾ ಮಂಗೇಶ್ಕರ್‌ ಆರೋಗ್ಯ  ಶೀಘ್ರ ಗುಣಮುಖರಾಗಲಿ ಎಂದು ಅಭಿಮಾನಿಗಳು ದೇವರಲ್ಲಿ ಪ್ರಾರ್ಥಿಸಿದ್ದಾರೆ.

ಲತಾ ಮಂಗೇಶ್ಕರ್‌ ಅವರಿಗೆ  2001ರಲ್ಲಿ ಭಾರತದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನ ನೀಡಿ ಗೌರವಿಸಲಾಗಿತ್ತು. ಇದರ ಜೊತೆಗೆ ಇನ್ನೂ ಹಲವಾರು ಪ್ರಶಸ್ತಿಗಳನ್ನುಅವರು ತಮ್ಮ ಮುಡಿಗೇರಿಸಿಕೊಂಡಿದ್ದಾರೆ.    ದಾಸಾಹೇಬ್ ಫಾಲ್ಕೆ ಪ್ರಶಸ್ತಿ, ಫ್ರಾನ್ಸ್‌ನ ಅತ್ಯುನ್ನತ ನಾಗರಿಕ ಪ್ರಶಸ್ತಿ, ಆಫೀಸರ್ ಆಫ್ ದಿ ಲೀಜನ್ ಆಫ್ ಹಾನರ್, ಜೊತೆಗೆ ಹಲವಾರು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗಿದೆ. ಅವರು 1948 ರಿಂದ 1974 ರವರೆಗೂ 25,000ಕ್ಕೂ ಹೆಚ್ಚು ಹಾಡುಗಳನ್ನು ಹಾಡಿ ಗಿನ್ನೆಸ್ ದಾಖಲೆ ಕೂಡ ಮಾಡಿದ್ದಾರೆ.

 

Share Post