Cinema

ಖ್ಯಾತ ಗಾಯಕಿ ಸಂಧ್ಯಾ ಮುಖರ್ಜಿ ನಿಧನ

ಪಶ್ಚಿಮ ಬಂಗಾಳದ ಖ್ಯಾತ ಗಾಯಕಿ ಸಂಧ್ಯಾ ಮುಖರ್ಜಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. 90 ವರ್ಷ ವಯಸ್ಸಿನ  ಸಂಧ್ಯಾ ಮುಖರ್ಜಿ ಅವರು ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಮಂಗಳವಾರ ರಾತ್ರಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

1970ರಲ್ಲಿ ರಾಷ್ಟ್ರ ಪ್ರಶಸ್ತಿ ವಿಜೇತರಾಗಿದ್ದ ಸಂಧ್ಯಾ ಮುಖರ್ಜಿ ಅವರು ಸಾವಿರಾರು ಹಾಡುಗಳಿಗೆ ಧನಿಯಾಗಿದ್ದಾರೆ. ಇತ್ತೀಚೆಗೆ ಕೇಂದ್ರ ಸರ್ಕಾರ ಸಂಧ್ಯಾ ಮುಖರ್ಜಿ ಅವರಿಗೆ ಪದ್ಮಶ್ರೀ ಪ್ರಶಸ್ತಿಯನ್ನು ಘೋಷಣೆ ಮಾಡಿತ್ತು ಆದರೆ ಅದನ್ನು ಅವರು ನಿರಾಕರಿಸಿದ್ದರು.

Share Post