Cinema

ಮಲಯಾಳಂ ಚಿತ್ರರಂಗಕ್ಕೆ ಆಘಾತ; ಖ್ಯಾತ ನಟಿ ಲಲಿತಾ ತೀವ್ರ ಅನಾರೋಗ್ಯದಿಂದ ನಿಧನ

ತಿರುವನಂತಪುರ: ಹಲವು ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಮಲಯಾಳಂ (MALAYALAM) ಚಿತ್ರರಂಗದ ಖ್ಯಾತ ನಟಿ ಲಲಿತಾ (LALITHA) ಅವರು ಕಳೆದ ರಾತ್ರಿ ನಿಧನರಾಗಿದ್ದಾರೆ. ರಂಗಭೂಮಿ (RANGA BHOOMI) ಮೂಲಕ ಚಿತ್ರರಂಗ ಪ್ರವೇಶಿಸಿದ್ದ ಲಲಿತಾ ಅವರು, 550 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಡಿಸಿದ್ದರು. ಲಲಿತಾ ಅವರು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ನಟಿ ಲಲಿತಾ ಅವರಿಗೆ 74 ವರ್ಷ ವಯಸ್ಸಾಗಿತ್ತು. ರಾಷ್ಟ್ರ ಪ್ರಶಸ್ತಿ, ಕೇರಳ ರಾಜ್ಯ ಪ್ರಶಸ್ತಿ, ಫಿಲ್ಮ್​ಫೇರ್ ಪ್ರಶಸ್ತಿ,​ ಜೀವಮಾನ ಸಾಧನೆ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿಗಳನ್ನು ಲಲಿತಾ ಅವರು ಮುಡಿಗೇರಿಸಿಕೊಂಡಿದ್ದರು. ಕೆಲ ತಿಂಗಳಿಂದ ತೀವ್ರ ಅನಾರೋಗ್ಯಕ್ಕೀಡಾಗಿದ್ದ ಅವರು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಲಲಿತಾ ಅವರ ನಿಧನಕ್ಕೆ ಕೇರಳದ ಚಿತ್ರರಂಗದ ಗಣ್ಯರು, ರಾಜಕಾರಣಿಗಳು, ಅಭಿಮಾನಿಗಳು ಸಂತಾಪ ಸೂಚಿಸಿದ್ದಾರೆ.

Share Post