CinemaCrime

ಬಾಲಿವುಡ್‌ ನಟಿ ನಿಖಿತಾ ದತ್ತಾ ಫೋನ್‌ ಕಿತ್ತು ಪರಾರಿಯಾದ ಅಪರಿಚಿತರು..!

ಮುಂಬೈ: ಇಲ್ಲಿನ ಬಾಂದ್ರಾದಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳಿಬ್ಬರು ಬಾಲುವುಡ್‌ ನಟಿ ನಿಖಿತಾ ದತ್ತಾ ಅವರ ಮೊಬೈಲ್‌ ಕಿತ್ತುಕೊಂಡು ಪರಾರಿಯಾಗಿರುವ ಘಟನೆ ನಡೆದಿದೆ. ಸೋಮವಾರ ರಾತ್ರಿ 7.30ರ ಸಮಯದಲ್ಲಿ ಈ ಘಟನೆ ನಡೆದಿದ್ದು, ನಟಿ ನಿಖಿತಾ ದತ್ತಾ ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ.


ನಿಖಿತಾ ದತ್ತಾ ಸಂಜೆ ವೇಳೆ ರಸ್ತೆಯಲ್ಲಿ ನಡೆದುಕೊಂಡು ಫೋನ್‌ನಲ್ಲಿ ಮಾತನಾಡುತ್ತಾ ಹೋಗುತ್ತಿದ್ದರು. ಈ ವೇಳೆ ದುಷ್ಕರ್ಮಿಗಳು ಕ್ಷಣಾರ್ಧದಲ್ಲಿ ಮೊಬೈಲ್‌ ಕಿತ್ತುಕೊಂಡು ಪರಾರಿಯಾಗಿದ್ದಾರೆ. ಈ ವೇಳೆ ಸ್ಥಳೀಯರು ನೆರವಿಗೆ ಬಂದರಾದರೂ, ಯಾವುದೇ ಪ್ರಯೋಜನವಾಗಿಲ್ಲ.

Share Post