ಪುನೀತ್ ಮನೆಗೆ ನಿರ್ಮಲಾನಂದ ಸ್ವಾಮೀಜಿ ಭೇಟಿ
ಬೆಂಗಳೂರು : ಇಂದು ಪುನೀತ್ ರಾಜ್ಕುಮಾರ್ ನಿವಾಸಕ್ಕೆ ಆಗಮಿಸಿದ ಆದಿಚುಂಚನಗಿರಿ ಶ್ರೀಗಳು ಅಪ್ಪು ಕುಟುಂಬಕ್ಕೆ ಸಾಂತ್ವನ ಹೇಳಿ ಧೈರ್ಯ ತುಂಬಿದರು. ಬಳಿಕ ಮಾತನಾಡಿದ ಅವರು, ಕನ್ನಡ ಕಲಾ ಕ್ಷೇತ್ರಕ್ಕೆ ಪುನೀತ್ ರಾಜ್ಕುಮಾರ್ ಅವರು ನೀಡಿದ ಕೊಡುಗೆ ಅಪಾರ. ಮೊದೊಲಿನಿಂದಲೂ ರಾಜ್ಕುಮಾರ್ ಕುಟುಂಬಕ್ಕೆ ಮತ್ತು ಮಠಕ್ಕೆ ಅವಿನಾಭಾವ ಸಂಬಂಧ ಇದೆ ಎಂದರು.
ರಾಜ್ಕುಮಾರ್ ಕುಟುಂಬದ ಕುಡಿ ಪುನೀತ್ ಅವರು ಚಿಕ್ಕ ವಯಸ್ಸಿನಿಂದ ಕಲೆಗೆ ಜೀವನ ಮುಡುಪಾಗಿಟ್ಟಿದ್ದರು. ಅವರ ಅಕಾಲಿಕ ನಿಧನದಿಂದಾಗಿ ಕುಟುಂಬ ಕಂಗೆಟ್ಟಿದೆ. ಅವರ ಅಗಲಿಕೆಯ ನೋವು ಭರಿಸಲು ಕಷ್ಟ. ಆದರೂ ಪ್ರತಿ ಕಷ್ಟದಲ್ಲೂ ಅಪ್ಪು ಕುಟುಂಬದ ಜೊತೆ ಮಠ ಇರುತ್ತದೆ ಎಂದು ತಿಳಿಸಿದರು.
ಅಪ್ಪು ಕುಟುಂಬಕ್ಕೆ ಮತ್ತು ಕನ್ನಡ ನಾಡಿಗೆ ಅಪ್ಪು ಅಗಲಿಕೆ ಭರಿಸುವ ಶಕ್ತಿ ದೇವರು ನೀಡಲಿ ಅಂತ ಕೇಳಿಕೊಳ್ತೀವಿ ಎಂದು ಹೇಳಿದರು