CinemaCrime

ಮೀಟೂ ಕೇಸ್‌ : ಶೃತಿ ಹರಿಹರನ್‌ಗೆ ನೊಟೀಸ್‌

ಬೆಂಗಳೂರು: ಸ್ಯಾಂಡಲ್‍ವುಡ್ ನಟಿ ಶೃತಿ ಹರಿಹರನ್ ಅವರಿಗೆ ಮೀಟೂ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನೊಟೀಸ್ ಜಾರಿಗೊಳಿಸಿದ್ದಾರೆ. ದಕ್ಷಿಣ ಭಾರತದ ಖ್ಯಾತ ನಟ ಅರ್ಜುನ್ ಸರ್ಜಾ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಮಾಡಿ 2018ರಲ್ಲಿ ನಟಿ ಶೃತಿಹರಿಹರನ್ ಅವರು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಶೃತಿಹರಿಹರನ್ ದೂರಿನ್ವಯ ಅರ್ಜುನ್ ಸರ್ಜಾ ವಿರುದ್ಧ 354, 354ಚಿ ಮತ್ತು 506 ಐಪಿಸಿ ಅಡಿ ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದರು.

ಮೂರು ವರ್ಷಗಳ ಬಳಿ ಇದೀಗ ಮತ್ತೆ ಮೀಟೂ ಪ್ರಕರಣ ಕುರಿತಂತೆ ತನಿಖಾಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗುವಂತೆ ಶೃತಿ ಹರಿಹರನ್‍ಗೆ ಕಬ್ಬನ್ ಪಾರ್ಕ್ ಪೊಲೀಸರು ನೋಟೀಸ್ ಜಾರಿಗೊಳಿಸಿದ್ದಾರೆ

Share Post