CinemaHealth

ತೆಲುಗು ನಟ ಪವನ್‌ ಕಲ್ಯಾಣ್‌ ಅಸ್ವಸ್ಥ; ಆಸ್ಪತ್ರೆಗೆ ದಾಖಲು

ಹೈದರಾಬಾದ್‌; ತೆಲುಗಿನ ಖ್ಯಾತ ಸಿನಿಮಾ ನಟ ಹಾಗೂ ಜನಸೇನಾ ಪಾರ್ಟಿ ಮುಖ್ಯಸ್ಥ ಪವನ್ ಕಲ್ಯಾಣ್ ಅವರು ಅಸ್ವಸ್ಥಗೊಂಡಿದ್ದಾರೆ. ತೀವ್ರ ಜ್ವರದಿಂದ ಬಳಲುತ್ತಿರುವ ಅವರು, ದಿಢೀರ್‌ ಅಂತ ಅಸ್ವಸ್ಥಗೊಂಡಿದ್ದಾರೆ. ಈ  ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ನೆಚ್ಚಿನ ನಟನ ಅನಾರೋಗ್ಯದಿಂದಾಗಿ ಅವರ ಅಭಿಮಾನಿಗಳ ಆತಂಕಗೊಂಡಿದ್ದಾರೆ.

ಪವನ್‌ ಕಲ್ಯಾಣ್‌ ಅವರು ಇತ್ತೀಚೆಗೆ ರಾಜಕೀಯದಲ್ಲಿ ಹೆಚ್ಚು ಆಕ್ಟೀವ್‌ ಆಗಿದ್ದಾರೆ. ಅವರು ಜನವಾಣಿ ಕಾರ್ಯಕ್ರಮ ನಡೆಸುತ್ತಿದ್ದು, ಇತ್ತೀಚೆಗೆ ಎರಡೂ ಗೋದಾವರಿ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡಿದ್ದರು. ಈ ವೇಳೆ ಅವರಿಗೆ ಜ್ವರ ಕಾಣಿಸಿಕೊಂಡಿತ್ತು ಎಂದು ತಿಳಿದುಬಂದಿದೆ. ಪವನ್‌ ಕಲ್ಯಾಣ್‌ ಅವರ ಭದ್ರತಾ ಸಿಬ್ಬಂದಿ, ಜನವಾಣಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಜನಸೇನಾ ನಾಯಕರಿಗೂ ಜ್ವರ ಕಾಣಿಸಿಕೊಂಡಿದೆ ಎಂದು ತಿಳಿದುಬಂದಿದೆ.

ಪವನ್‌ ಕಲ್ಯಾಣ್‌ಗೆ ಅನಾರೋಗ್ಯ ಹಿನ್ನೆಲೆಯಲ್ಲಿ ಜನವಾಣಿ ಕಾರ್ಯಕ್ರಮಗಳನ್ನು ಮುಂದೂಡಲಾಗಿದೆ.

 

Share Post