ನಟಿ ರಚಿತಾ ರಾಮ್ ಆರೋಗ್ಯ ಚೇತರಿಕೆ: ಆಸ್ಪತ್ರೆಯಿಂದ ಡಿಸ್ಚಾರ್ಜ್
ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಸಾಲು ಸಾಲು ಸಿನಿಮಾಗಳಲ್ಲಿ ಬ್ಯೂಸಿಯಾಗಿರುವ ಡಿಂಪಲ್ ಕ್ವೀನ್ ರಚಿತಾ ರಾಮ್ ಅಭಿನಯದ ಲವ್ ಯೂ ರಚ್ಚು ಚಿತ್ರ ರಿಲೀಸ್ ಆಗುತ್ತಿದೆ. ಹೀಗಾಗಿ ಸದಾ ಶೂಟಿಂಗ್ ಮತ್ತು ಸಿನಿಮಾ ಪ್ರಮೋಷನ್ ನಲ್ಲಿ ತೊಡಗಿದ್ದ ರಚಿತಾ ಅವರಿಗೆ ಇಂದು ಆರೋಗ್ಯದಲ್ಲಿ ಏರುಪೇರು ಆಗಿದೆ. ಆಯಾಸಕ್ಕೆ ಒಳಗಾಗಿದ್ದ ನಟಿ ರಚಿತಾ ರಾಮ್ ಆಸ್ಪತ್ರೆಗೆ ದಾಖಲಿಸಲಾಯಿತು. ಇದೇ ತಿಂಗಳು ೩೧ಕ್ಕೆ ಸಿನಿಮಾ ರಿಲೀಸ್ ಆಗುತ್ತಿದೆ. ಹೀಗಾಗಿ ಸಿಕ್ಕಾಪಟ್ಟೆ ಪ್ರಮೋಷನ್ ನಲ್ಲಿ ರಚಿತಾ ನಿರತರಾಗಿದ್ದರು. ಮಂಗಳೂರಿನಿಂದ ಬೆಂಗಳೂರಗೆ ಟ್ರಾವೆಲ್ ಮಾಡುತ್ತಿದ್ದರು. ಈ ವೇಳೆ ಅವರಿಗೆ ಒತ್ತಡ ಹೆಚ್ಚಾಗಿದ್ದರಿಂದ ಆಯಾಸಕ್ಕೆ ಒಳಗಾಗಿದ್ದು, ಶೀತ ಮತ್ತು ಜ್ವರದಿಂದ ಬಳಲುತ್ತಿದ್ದರು ಎನ್ನಲಾಗಿದೆ.. ಈ ವೇಳೆ ಆಸ್ಪತ್ರೆಗೆ ದಾಖಲಾಗಿದ್ದು, ಆರೋಗ್ಯ ಚೇತರಿಕೆ ಕಂಡುಬಂದಿದ್ದರಿಂದ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.