BengaluruCinemaNational

Radhika Kumaraswamy; ರಾಧಿಕಾ ಕುಮಾರಸ್ವಾಮಿ ʻಅಜಾಗ್ರತʼ; ಏಳು ಭಾಷೆಗಳಲ್ಲಿ ನಟಿಸ್ತಿದ್ದಾರೆ ಸ್ವೀಟಿ

ಬೆಂಗಳೂರು; ನಟಿ ರಾಧಿಕಾ ಕುಮಾರಸ್ವಾಮಿ ಸಿನಿಮಾ ಇಂಡಸ್ಟ್ರಿಯಿಂದ ದೂರವೇ ಉಳಿದಿದ್ದರು. ಇದೀಗ ಅವರು ಚಿತ್ರರಂಗಕ್ಕೆ ರಿ ಎಂಟ್ರಿ ಪಡೆದಿದ್ದಾರೆ. ಸುಮಾರು ಏಳು ಭಾಷೆಗಳಲ್ಲಿ ನಿರ್ಮಾಣವಾಗುತ್ತಿರುವ ಚಿತ್ರದಲ್ಲಿ ರಾಧಿಕಾ ಕುಮಾರಸ್ವಾಮಿ ನಾಯಕಿಯಾಗಿ ನಟಿಸುತ್ತಿದ್ದಾರೆ. ಆ ಸಿನಿಮಾದ ಹೆಸರು ಅಜಾಗ್ರತಾ. ಈ ಸಿನಿಮಾ ಮುಹೂರ್ತವನ್ನು ಹೈದರಾಬಾದ್‌ನಲ್ಲಿ ಹಮ್ಮಿಕೊಳ್ಳಲಾಗಿದೆ.

ಮೇ 13ರಂದು ಹೃದರಾಬಾದ್‌ನಲ್ಲಿ ರಾಮಾನಾಯ್ಡು ಸ್ಟುಡಿಯೋದಲ್ಲಿ ಈ ಚಿತ್ರದ ಮುಹೂರ್ತ ನಡೆಯಲಿದೆ ಎಂದು ತಿಳಿದುಬಂದಿದೆ. ಅಜಾಗ್ರತಾ ಸಿನಿಮಾ ಕನ್ನಡ ಸೇರಿ ಒಟ್ಟು ಏಳು ಭಾಷೆಗಳಲ್ಲಿ ನಿರ್ಮಾಣವಾಗಲಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ. ರವಿರಾಜ್‌ ಅವರು ಈ ಚಿತ್ರವನ್ನು ನಿರ್ಮಿಸುತ್ತಿದ್ದು, ಎಂ.ಶಶಿಧರ್‌ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರ ಒಂದು ಸೈಕಾಲಜಿಕಲ್ ಕ್ರೈಂ ಥ್ರಿಲ್ಲೆರ್ ಕಥೆ ಹೊಂದಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ. ರಾಧಿಕಾ ಕುಮಾರಸ್ವಾಮಿ, ಸ್ಪರ್ಶ ರೇಖಾ, ದೇವರಾಜ್, ಸುಚೇಂದ್ರ ಪ್ರಸಾದ್, ವಿನಯ್ ಪ್ರಸಾದ್, ಚಿತ್ರ ಶೆಣೈ ಮುಂತಾದವರು ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.

Share Post