CinemaNational

RRR ಸಿನಿಮಾ ಪ್ರೊಮೋಷನ್‌ ; ಇಂದು ಬೆಂಗಳೂರಿಗೆ ಜ್ಯೂ.ಎನ್‌ಟಿಆರ್‌

ಬಾಹುಬಲಿ ಖ್ಯಾತಿಯ ರಾಜಮೌಳಿ ನಿರ್ದೇಶನದ ಮತ್ತೊಂದು ಅದ್ದೂರಿನ ಚಿತ್ರ ಆರ್‌ಆರ್‌ಆರ್‌ 2022ರ ಜನವರಿ 7ರಂದು ತೆರೆಗೆ ಬರಲು ಸಿದ್ಧವಾಗಿದೆ. ಐದು ಭಾಷೆಗಳಲ್ಲಿ ಏಕ ಕಾಲದಲ್ಲಿ ತೆರೆ ಕಾಣಲಿರುವ ಈ ಚಿತ್ರಕ್ಕೆ 350 ರಿಂದ 400 ಕೋಟಿ ರೂಪಾಯಿ ಖರ್ಚು ಮಾಡಲಾಗಿದೆ. ರಿಲೀಸ್‌ಗೆ ಇನ್ನೂ ಒಂದೂವರೆ ತಿಂಗಳು ಬಾಕಿ ಇದ್ದು, ಈಗಾಗಲೇ ಚಿತ್ರದ ಪ್ರೊಮೋಷನ್‌ ಶುರುವಾಗಿದೆ.

ಈ ಹಿನ್ನೆಲೆಯಲ್ಲಿ ಇಂದು ಸಂಜೆ ಜ್ಯೂನಿಯರ್‌ ಎನ್‌ಟಿಆರ್‌ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಚಿತ್ರದ ನಿರ್ದೇಶಕ ರಾಜಮೌಳಿ ಸೇರಿದಂತೆ ಹಲವು ಗಣ್ಯರು ಬೆಂಗಳೂರಿನಲ್ಲಿ ನಡೆಯಲಿರುವ ಚಿತ್ರದ ಪ್ರೊಮೋಷನ್‌ನಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಚಿತ್ರದಲ್ಲಿ ಜ್ಯೂನಿಯರ್‌ ಎನ್‌ಟಿಆರ್‌ ಹಾಗೂ ಚಿರಂಜೀವಿ ಪುತ್ರ ರಾಮ್‌ ಚರಣ್‌ ನಟಿಸಿದ್ದಾರೆ.

Share Post