CinemaNational

ವಿದೇಶದಲ್ಲಿ ಶೂಟಿಂಗ್‌ ವೇಳೆ ನಟ ಶಾರುಖ್‌ ಖಾನ್‌ಗೆ ಗಾಯ

ಮುಂಬೈ; ವಿದೇಶದಲ್ಲಿ ನಡೆಯುತ್ತಿದ್ದ ಶೂಟಿಂಗ್‌ ವೇಳೆ ಬಾಲಿವುಡ್‌ ನಟ ಶಾರುಖ್ ಖಾನ್‌ ಗಾಯಗೊಂಡಿದ್ದಾರೆ. ಇದರಿಂದಾಗಿ ಶೂಟಿಂಗ್‌ ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ. ಶಾರುಖ್‌ ಅವರ ಮೂಗಿಗೆ ಏಟಾಗಿದ್ದು, ತೀವ್ರ ರಕ್ತಸ್ರಾವವಾಗಿದೆ. ಲಾಸ್‌ ಏಂಜಲೀಸ್‌ನಲ್ಲಿ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.

ಪಠಾಣ್‌ ಯಶಸ್ಸಿನ ನಂತರ ಹೊಸ ಚಿತ್ರವೊಂದರ ಶೂಟಿಂಗ್‌ ನಲ್ಲಿ ಶಾರುಖ್‌ ಖಾನ್‌ ಭಾಗವಹಿಸಿದ್ದರು. ಈ ವೇಳೆ ಗಾಯವಾಗಿದೆ. ಆಸ್ಪತ್ರೆಯಲ್ಲಿ ಅವರಿಗೆ ಸಣ್ಣ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಆದ್ರೆ ಯಾವುದೇ ತೊಂದರೆ ಇಲ್ಲ ಎಂದು ವೈದ್ಯರು ಹೇಳಿದ್ದಾರೆ. ಮೂಗಿಗೆ ಬ್ಯಾಂಡೇಜ್‌ ಹಾಕಲಾಗಿದ್ದು, ಸದ್ಯ ಅವರು ಮಯಂಬೈಗೆ ಹಿಂತಿರುಗಿದ್ದು, ಮನೆಯಲ್ಲಿ ವಿಶ್ರಾಂತಿ ಪಡೆದುಕೊಳ್ಳುತ್ತಿದ್ದಾರೆ.

Share Post