ಕಟೀಲು ದುರ್ಗಾ ಪರಮೇಶ್ವರಿ ದರ್ಶನ ಪಡೆದ ಶಿಲ್ಪಾ ಶೆಟ್ಟಿ
ಮಂಗಳೂರು; ಕರ್ನಾಟಕ ಮೂಲದವರೇ ಆದ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿಯವರು ಇಂದು ಕಟೀಲಿಗೆ ಭೇಟಿ ನೀಡಿದ್ದರು. ಕುಟುಂಬ ಸಮೇತವಾಗಿ ಆಗಮಿಸಿದ್ದ ಶಿಲ್ಪಾ ಶೆಟ್ಟಿ ದುರ್ಗಾ ಪರಮೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು.
ಶಿಲ್ಪಾ ಶೆಟ್ಟಿ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರಾಗಿದ್ದು, ಸಿನಿಮಾಗೆ ಎಂಟ್ರಿ ಕೊಟ್ಟ ಮೇಲೆ ಮುಂಬೈನಲ್ಲಿ ನೆಲೆಸಿದ್ದಾರೆ. ಆದರೆ ಅವರು ತಮ್ಮ ಹುಟ್ಟೂರನ್ನು ಮರೆತಿಲ್ಲ. ಆಗಾಗ, ದಕ್ಷಿಣ ಜಿಲ್ಲೆಗೆ ಆಗಮಿಸುತ್ತಿರುತ್ತಾರೆ. ಭೂತ ಕೋಲಾ ಸೇರಿದಂತೆ ಹಲವು ಧಾರ್ಮಿಕ ಕಾರ್ಯಗಳಲ್ಲಿ ಪಾಲ್ಗೊಳ್ಳುತ್ತಿರುತ್ತಾರೆ. ಜೊತೆಗೆ ದಕ್ಷಿಣ ಕನ್ನಡ ಜಿಲ್ಲೆಗಳ ದೇಗುಲಗಳ ದರ್ಶನವೂ ಮಾಡುತ್ತಿದ್ದಾರೆ.
ಕಳೆದ ವರ್ಷವೂ ಶಿಲ್ಪಾ ಶೆಟ್ಟಿ ಮಂಗಳೂರಿಗೆ ಬಂದಿದ್ದರು. ಇದೀಗ ಕುಟುಂಬ ಸಮೇತ ಕಟೀಲು ದುರ್ಗಾ ಪರಮೇಶ್ವರಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.