ಕಲಾತಪಸ್ವಿ ರಾಜೇಶ್ ಅವರ ಆರೋಗ್ಯದಲ್ಲಿ ಚೇತರಿಕೆ
ಬೆಂಗಳೂರು : ಕಳೆದ ಎರಡು ದಿನಗಳ ಹಿಂದೆ ಕಲಾ ತಪಸ್ವಿ ರಾಜೇಶ್ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿತ್ತು. ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ರಾಜೇಶ್ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ಇಂದು ಅವರ ಆರೋಗ್ಯದಲ್ಲಿ ಚೇತರಿಕೆ ಕಾಣಿಸಿದೆ.
ಉಸಿರಾಟದ ಸಮಸ್ಯೆಯಿಂದ ತೊಂದರೆಗೊಳಗಾಗಿದ್ದ ರಾಜೇಶ್ ಅವರು ಇಂದು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಡಾಕ್ಟರ್ ತಿಳಿಸಿದ್ದಾರೆ. ಕಸ್ತೂರಿ ಬಾ ನಗರದ ನ್ಯೂ ಜನಪ್ರಿಯ ಹಾಸ್ಪಿಟಲ್‌ಗೆ ದಾಖಲಾಗಿರುವ ರಾಜೇಶ್ ಅವರಿಗೆ ೫ ಮಕ್ಕಳಿದ್ದಾರೆ.
ಕಿಡ್ನಿ ವೈಫಲ್ಯ ಆಗಿರು ರಾಜೇಶ್ ಅವರಿಗೆ 82 ವರ್ಷ ವಯಸ್ಸಾಗಿದೆ. ಕೆಲ ತಿಂಗಳುಗಳ ಹಿಂದಷ್ಟೇ ತಮ್ಮ ಹೆಂಡತಿಯನ್ನು ಸಹ ರಾಜೇಶ್ ಅವರು ಕಳೆದುಕೊಂಡಿದ್ದಾರೆ.