Cinema

ಸಾಲಾರ್‌ ಸಿನಿಮಾ ಶೂಟಿಂಗ್‌ ಮತ್ತೆ ಶುರು; ಹೈದರಾಬಾದ್‌ನಲ್ಲಿ ನೀಲ್‌ ಕಮಾಲ್‌..!

ಹೈದರಾಬಾದ್‌; ಪ್ರಭಾಸ್ ಮತ್ತು ಪ್ರಶಾಂತ್ ನೀಲ್ ಕಾಂಬಿನೇಷನ್‌ನ ಸಲಾರ್ ಸಿನಿಮಾದ ಶೂಟಿಂಗ್ ಮತ್ತೆ ಶುರುವಾಗಿದೆ. ಹೈದರಾಬಾದ್‌ನಲ್ಲಿ ಶೂಟಿಂಗ್‌ ನಡೆಯುತ್ತಿದ್ದು, ಪ್ರಭಾಸ್, ಶ್ರುತಿ ಹಾಸನ್ ಸೇರಿದಂತೆ ಹಲವು ಕಲಾವಿದರು ಈ ಹಂತದ ಶೂಟಿಂಗ್ ನಲ್ಲಿ ಭಾಗಿಯಾಗಿದ್ದಾರೆ.

ಅಂದುಕೊಂಡಂತೆ ಆಗಿದ್ದರೆ ಈ ಹಿಂದೆಯೇ ಚಿತ್ರೀಕರಣಕ್ಕೆ ಪ್ರಶಾಂತ್ ನೀಲ್‌ ತೆರೆಳಬೇಕಿತ್ತು. ಗಾಯದ ಸಮಸ್ಯೆಯಿಂದಾಗಿ ಪ್ರಭಾಸ್ ವಿಶ್ರಾಂತಿ ತಗೆದುಕೊಳ್ಳುತ್ತಿದ್ದರು. ಇದೀಗ ಪ್ರಭಾಸ್ ಎಲ್ಲ ರೀತಿಯಿಂದಲೂ ಫಿಟ್ ಆಗಿದ್ದು, ಹಲವು ದಿನಗಳ ಕಾಲ ಇದೇ ಸಿನಿಮಾದ ಶೂಟಿಂಗ್ ನಲ್ಲಿ ಪ್ರಭಾಸ್ ಭಾಗಿಯಾಗಲಿದ್ದಾರೆ.

 

 

Share Post