Cinema

ಕಾಶ್ಮೀರಿ ಫೈಲ್ಸ್‌ ಸಿನಿಮಾ ನಿರ್ದೇಶಕ ವಿವೇಕ್‌ ಅಗ್ನಿಹೋತ್ರಿಗೆ `Y’ ಕ್ಯಾಟಗರಿ ಭದ್ರತೆ ನಿಯೋಜನೆ

ಮುಂಬೈ: ದಿ ಕಾಶ್ಮೀರಿ ಫೈಲ್ಸ್‌ ಚಿತ್ರ ತೆರೆ ಕಂಡಾಗಿನಿಂದ ಒಂದಲ್ಲಾ ಒಂದು ಟೀಕೆ ಟಿಪಪಣಿಗಳಿಗೆ ಗುರಿಯಾಗುತ್ತಲೇ ಇದೆ. ಇದು ಕಾಶ್ಮೀರದಲ್ಲಿ ನೆಲೆಸಿದ್ದ ಪಂಡಿತರ ಹತ್ಯೆ ಮತ್ತು ವಲಸೆಗಳಿಗೆ ಸಂಬಂಧಿಸಿದ ಚಿತ್ರವಾಗಿದ್ದು ಸಾಕಷ್ಟು ಜನರ ಕೆಂಗಣ್ಣಿಗೆ ಕೂಡ ಗುರಿಯಾಗಿದೆ. ಈ ಸಿನಿಮಾದಲ್ಲಿ ವ್ಯಕ್ತವಾಗಿರುವ ಕೆಲವು ಘಟನೆಗಳ ಬಗ್ಗೆ ಸಾಕಷ್ಟು ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸಿನಿಮಾ ನಿರ್ದೇಶಕ ವಿವೇಕ್‌ ಅಗ್ನಿಹೋತ್ರಿಗೆ `Y’ ಕ್ಯಾಟಗರಿ ಭದ್ರತೆಯನ್ನು ನಿಯೋಜನೆ ಮಾಡಲಾಗಿದೆ ಎಂದು ಸರ್ಕಾರದ ಮೂಲಗಳಿಂದ ತಿಳಿದುಬಂದಿದೆ.

Share Post