ಅವಿವಾ ಬಿದ್ದಪ್ಪ ಜೊತೆ ಅಭಿಷೇಕ್ ಅಂಬರೀಶ್ ನಿಶ್ಚಿತಾರ್ಥ; ಯಾರೆಲ್ಲಾ ಬಂದಿದ್ದರು..?
ಬೆಂಗಳೂರು; ಅಂದುಕೊಂಡಂತೆ ಅಭಿಷೇಕ್ ಅಂಬರೀಶ್ ಅವರು ಅವಿವಾ ಬಿದ್ದಪ್ಪ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್ ಒಂದರಲ್ಲಿ ಈ ಅದ್ದೂರಿ ನಿಶ್ಚಿತಾರ್ಥ ಕಾರ್ಯಕ್ರಮ ನಡೆಯಿತು.
ಅವಿವಾ ಬಿದ್ದಪ್ಪ ಖ್ಯಾತ ಫ್ಯಾಷನ್ ಡಿಸೈನರ್ ಪ್ರಸಾದ್ ಬಿದ್ದಪ್ಪ ಅವರ ಪುತ್ರಿ. ಚಿತ್ರರಂಗದ ಹಲವು ಗಣ್ಯರು ಈ ನಿಶ್ಚಿತಾರ್ಥಕ್ಕೆ ಸಾಕ್ಷಿಯಾದರು. ಸುಮಲತಾ ಅಂಬರೀಶ್, ಅವಿವಾ ಅವರ ತಂದೆ-ತಾಯಿ ಹಾಗೂ ನಟ, ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್ ಹಾಜರಿದ್ದರು.