Cinema

ಟಾಯ್ಲೆಟ್‌ ಗೋಡೆ ಕುಸಿತ; ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ದುರ್ಮರಣ

ತಿರುನೆಲ್ವೇಲಿ: ಇಲ್ಲಿನ ಖಾಸಗಿ ಶಾಲೆಯೊಂದರ ಶೌಚಾಲಯ ಕಟ್ಟಡದ ಗೋಡೆ ಕುಸಿದು ದುರಂತ ಸಂಭವಿಸಿದೆ. ಗೋಡೆ ಕುಸಿದಿದ್ದರಿಂದ ಅದರ ಅಡಿ ಸಿಲುಕಿ ಮೂವರು ವಿದ್ಯಾರ್ಥಿಗಳು ದಾರುಣ ಸಾವನ್ನಪ್ಪಿದ್ದಾರೆ.

ಶೌಚಾಲಯಕ್ಕೆ ಹೋದ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ಗೋಡೆ ದಿಢೀರ್‌ ಅಂತ ಕುಸಿದುಬಿದ್ದಿದೆ. ಕಳೆದ ಒಂದು ತಿಂಗಳಿಂದ ತಮಿಳುನಾಡಿನಲ್ಲಿ ಭಾರಿ ಮಳೆಯಾಗಿತ್ತು. ಈ ಹಿನ್ನೆಲೆಯಲ್ಲಿ ಗೋಡೆಗಳು ನೆನೆದಿದ್ದವು. ಇದರಿಂದಾಗಿಯೇ ಗೋಡೆ ಕುಸಿದಿದೆ ಎಂದು ಹೇಳಲಾಗುತ್ತಿದೆ.

ಗೋಡೆಯ ಅವಶೇಗಳಡಿ ಸಿಲುಕಿದ್ದ ಇನ್ನಿಬ್ಬರು ವಿದ್ಯಾರ್ಥಿಗಳನ್ನು ರಕ್ಷಣೆ ಮಾಡಲಾಗಿದೆ. ಇಬ್ಬರು ವಿದ್ಯಾರ್ಥಿಗಳಿಗೂ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಗೊತ್ತಾಗಿದೆ.

Share Post