Cinema

ಮಾರ್ಚ್‌ 21ಕ್ಕೆ ತೂಫಾನ್‌ ಲಿರಿಕಲ್‌ ಸಾಂಗ್‌ ಅಬ್ಬರ: ಕೆಜಿಎಫ್‌ ತಂಡದಿಂದ ಅಧಿಕೃತ ಘೋಷಣೆ

ಬೆಂಗಳೂರು: ಪ್ಯಾನ್ ಇಂಡಿಯಾ ಚಿತ್ರವಾಗಿ ಬಿಡುಗಡೆಯಾದ ಕನ್ನಡದ ಕೆಜಿಎಫ್ ಪಾರ್ಟ್‌-1 ಚಿತ್ರ ಬಾಕ್ಸ್ ಆಫೀಸ್‌ ಧೂಳೆಬ್ಬಿಸಿರುವುದು ಎಲ್ಲರಿಗೂ ಗೊತ್ತೇ ಇದೆ. ಪ್ರಶಾಂತ್ ನೀಲ್ ನಿರ್ದೇಶನದ, ಔಟ್ ಅಂಡ್ ಔಟ್ ಆಕ್ಷನ್ ಎಂಟರ್‌ಟೈನರ್‌ನ ಯೂನಿವರ್ಸಲ್ ಸಬ್ಜೆಕ್ಟ್‌ನ ಈ ಚಿತ್ರವು ಇತರ ಭಾಷೆಯ ಪ್ರೇಕ್ಷಕರನ್ನು ಆಕರ್ಷಿಸುವಲ್ಲಿ ಯಶಸ್ವಿಯಾಗಿದೆ. ಚಿತ್ರದ ಯಶಸ್ಸಿನೊಂದಿಗೆ ಮತ್ತೊಂದು ಪವರ್ ಫುಲ್ ಸೀಕ್ವೆಲ್ ಬರಲಿದೆ ಎಂದು ಚಿತ್ರತಂಡ ಈ ಹಿಂದೆಯೇ ಬಹಿರಂಗಪಡಿಸಿತ್ತು.

ಇದರೊಂದಿಗೆ ಈ ಸಿನಿಮಾದ ಸೀಕ್ವೆಲ್‌ಗಾಗಿ ಪ್ರೇಕ್ಷಕರು ಕಾತರದಿಂದ ಕಾಯುತ್ತಿದ್ದಾರೆ. ಸೀಕ್ವೆಲ್‌ನ ಚಿತ್ರೀಕರಣ ಪೂರ್ಣಗೊಂಡಿದ್ದರೂ, ಕರೋನಾದಿಂದಾಗಿ ಚಿತ್ರ ಬಿಡುಗಡೆಯಾಗಲಿಲ್ಲ. ಸತತವಾಗಿ ಹಲವಾರು ಬಾರಿ ತಡವಾಗಿದ್ದ ಕೆಜಿಎಫ್ ಚಾಪ್ಟರ್ 2 ಅನ್ನು ಇದೇ ಬೇಸಿಗೆಯಲ್ಲಿ ಏಪ್ರಿಲ್‌ನಲ್ಲಿ ಬಿಡುಗಡೆ ಮಾಡಲು ಚಿತ್ರತಂಡ ಸಜ್ಜಾಗಿದೆ. ಇದೀಗ ಚಿತ್ರದ ಮೊದಲ ಲಿರಿಕಲ್ ಸಾಂಗ್ ಬಿಡುಗಡೆ ಮಾಡುವುದಾಗಿ ಚಿತ್ರತಂಡ ಪ್ರಕಟಿಸಿದೆ.

ಇದುವರೆಗೂ ಹೀರೋ ಕ್ಯಾರೆಕ್ಟರ್ ಗೆ ಸಂಬಂಧಿಸಿದ ಪೋಸ್ಟರ್ ಹಾಗೂ ಟೀಸರ್ ಗಳನ್ನಷ್ಟೇ ಬಿಡುಗಡೆ ಮಾಡಿದ್ದ ಚಿತ್ರತಂಡ, ಮಾರ್ಚ್ 21ರಂದು ಬೆಳಗ್ಗೆ 11.07ಕ್ಕೆ ಮೊದಲ ಲಿರಿಕಲ್ ಸಾಂಗ್ ‘ತೂಫಾನ್’ ಬಿಡುಗಡೆ ಮಾಡುವುದಾಗಿ ಪ್ರಕಟಿಸಿದೆ. ಈ ನಿಟ್ಟಿನಲ್ಲಿ ಇಂಟರೆಸ್ಟಿಂಗ್ ಪೋಸ್ಟರ್ ಕೂಡ ಬಿಡುಗಡೆ ಮಾಡಿದೆ. ಈ ಪೋಸ್ಟರ್‌ನಲ್ಲಿ ಕೊಳೆಗೇರಿಗಳಲ್ಲಿ ವಾಸಿಸುವ ಮತ್ತು ಕಲ್ಲಿದ್ದಲು ಗಣಿಗಳಲ್ಲಿ ಕೆಲಸ ಮಾಡುವ ಮಕ್ಕಳು ಪೋಸ್ ಕೊಡುವ ರೀತಿ ಎಲ್ಲರನ್ನೂ ಆಕರ್ಷಿಸಿದೆ. ಮೈನಿಂಗ್ ಮಾಫಿಯಾ ಹಿನ್ನಲೆಯಲ್ಲಿ ಮೂಡಿಬರುತ್ತಿರುವ ಈ ಸಿನಿಮಾದಲ್ಲಿ ಯಶ್ ‘ರಾಖಿ ಭಾಯ್’ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಈ ಸಿನಿಮಾದಲ್ಲಿ ವಿಲನ್ ಆಗಿ ಸಂಜಯ್ ದತ್ ಅವರ ಲುಕ್ ಕೂಡ ತುಂಬಾ ವೆರೈಟಿ ಆಗಿದ್ದು, ಈ ಸಿನಿಮಾ ನೋಡಲು ಪ್ರೇಕ್ಷಕರು ಕಾತರದಿಂದ ಕಾಯುತ್ತಿದ್ದಾರೆ. ಏಪ್ರಿಲ್ 14 ರಂದು ವಿಶ್ವದಾದ್ಯಂತ ಚಿತ್ರವನ್ನು ಬಿಡುಗಡೆ ಮಾಡಲು ಚಿತ್ರತಂಡ ಸಜ್ಜಾಗಿದೆ. ಚಿತ್ರದಲ್ಲಿ ಶ್ರೀನಿಧಿ ಶೆಟ್ಟಿ ನಾಯಕಿಯಾಗಿ ನಟಿಸಿದ್ದು, ಬಾಲಿವುಡ್ ನಟಿ ರವೀನಾ ಟಂಡನ್ ಪ್ರಮುಖ ಪಾತ್ರದಲ್ಲಿದ್ದಾರೆ. ಹೊಂಬಾಳೆ ಫಿಲಂಸ್ ಬ್ಯಾನರ್ ಭಾರೀ ಬಜೆಟ್‌ನಲ್ಲಿ ಚಿತ್ರ ನಿರ್ಮಾಣವಾಗಿದೆ.

Share Post