ಮುಂಬೈ: ಗಾನ ಕೋಗಿಲೆ, ಭಾರತ ರತ್ನ ಲತಾ ಮಂಗೇಶ್ಕರ್ (92) ಅವರ ನಿಧನಕ್ಕೆ ಸಂತಾಪ ಸೂಚನವಾಗಿ ದೇಶಾದ್ಯಂತ ಎರಡು ದಿನ ಶೋಕಾಚರಣೆ ನಡೆಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ದೇಶಾದ್ಯಂತ ಎಲ್ಲಾ ಸರ್ಕಾರಿ ಕಚೇರಿಗಳ ಬಳಿ ಎರಡು ದಿನ ರಾಷ್ಟ್ರ ಧ್ವಜವನ್ನು ಅರ್ಧ ಮಟ್ಟದಲ್ಲಿ ಹಾರಿಸಲಾಗುತ್ತದೆ ಎಂದು ತಿಳಿದುಬಂದಿದೆ.