Cinema

ಹಿರಿಯ ನಟ ದ್ವಾರಕೀಶ್‌ ನಿಧನ; ಗಣ್ಯರ ಕಂಬನಿ

ಬೆಂಗಳೂರು; ಹಿರಿಯ ನಟ, ನಿರ್ದೇಶಕ ದ್ವಾರಕೀಶ್‌ ಅವರು ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 81 ವರ್ಷ ವಯಸ್ಸಾಗಿತ್ತು.. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ದ್ವಾರಕೀಶ್‌ ಅವರು ಇಂದು ನಿಧನರಾಗಿದದಾರೆ,

ನಟರಾಗಿ, ನಿರ್ಮಾಪಕರಾಗಿ ದ್ವಾರಕೀಶ್‌ ಅವರು ದೊಡ್ಡ ಹೆಸರು ಮಾಡಿದ್ದರು.. ಐದು ದಶಕಗಳಿಗೂ ಹೆಚ್ಚು ಕಾಲ ಅವರು ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದರು.. ಇಂದು ಬೆಳಗ್ಗೆ ದ್ವಾರಕೀಶ್ ನಿಧನರಾಗಿದ್ದು, ಈ ಸುದ್ದಿಯನ್ನು ಅವರ ಪುತ್ರ ಯೋಗೀಶ್ ಅವರ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ದ್ವಾರಕೀಶ್ ಆಗಸ್ಟ್ ೧೯, ೧೯೪೨ರಂದು ಹುಣಸೂರು ನಲ್ಲಿ ಶಮಾರಾವ್ ಮತ್ತು ಜಯಮ್ಮರವರಿಗೆ ಜನಿಸಿದರು, ಶಾರದಾ ವಿಲಾಸ್ ಮತ್ತು ಬನುಮಯ್ಯ ಶಾಲೆಯಲ್ಲಿ ತನ್ನ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣದ ನಂತರ CPC ಪಾಲಿಟೆಕ್ನಿಕ್‌ನಿಂದ ಮೆಕ್ಯಾನಿಕಲ್ ಇಂಜಿನಿಯರಿಂಗ್ ಡಿಪ್ಲೊಮಾ ಕೋರ್ಸ್ ಮುಗಿಸಿದರು. ನಂತರ ಅವರ ಸೋದರನ ಜೊತೆ ಸೇರಿ ಭಾರತ್ ಆಟೋ ಸ್ಪೇರ್ ಸ್ಟೋರ್ ಶುರುಮಾಡಿದರು.೧೯೬೩ರಲ್ಲಿ, ಅವರು ವ್ಯಾಪಾರ ಬಿಟ್ಟು ಸಿನೆಮಾ ನಟನೆಯನ್ನು ಆಯ್ದುಕೊಂಡರು.ಕನ್ನಡದ ಪ್ರಮುಖ ನಟರಾದ ವಿಷ್ಣುವರ್ಧನ್ ಮತ್ತು ದ್ವಾರಕೀಶ್ ಜೋಡಿ ಕಳ್ಳ-ಕುಳ್ಳ ಜೋಡಿ ಎಂದು ಪ್ರಸಿದ್ಧವಾಗಿತ್ತು.

 

Share Post