CinemaHealth

ಖ್ಯಾತ ಹಿರಿಯ ನಟಿ ಹೇಮಾ ಚೌಧರಿಗೆ ತೀವ್ರ ಅನಾರೋಗ್ಯ; ಖಾಸಗಿ ಆಸ್ಪತ್ರೆಗೆ ದಾಖಲು

ಬೆಂಗಳೂರು; ಕನ್ನಡದ ಖ್ಯಾತ ಹಿರಿಯ ನಟಿ ಹೇಮಾ ಚೌಧರಿ ಇದ್ದಕ್ಕಿದ್ದಂತೆ ತೀವ್ರ ಅನಾರೋಗ್ಯಕ್ಕೀಡಾಗಿದ್ದಾರೆ. ಎರಡು ದಿನಗಳ ಹಿಂದೆ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬ್ರೈನ್‌ ಹ್ಯಾಮರೇಜ್‌ನಿಂದ ಅವರು ಬಳಲುತ್ತಿದ್ದಾರೆ ಎಂದು ಹೇಳಲಾಗಿದೆ. ತೀವ್ರ ನಿಗಾ ಘಟಕದಲ್ಲಿ ಹೇಮಾ ಚೌಧರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಹೇಮಾ ಚೌಧರಿ ಅವರ ದೇಹ ಚಿಕಿತ್ಸೆ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಹೇಳಲಾಗುತ್ತಿದೆ. ಐರ್ಲೆಂಡ್‌ನಲ್ಲಿಉರವ ಅವರ ಪುತ್ರ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಅವರ ಅಭಿಮಾನಿಗಳು ಬೇಗ ಗುಣಮುಖರಾಗಲಿ ಎಂದು ಪ್ರಾರ್ಥನೆ ಮಾಡುತ್ತಿದ್ದಾರೆ.

ಇತ್ತೀಚೆಗೆ ಹಿರಿಯ ನಟಿ ಲೀಲಾವತಿ ನಿಧನರಾಗಿದ್ದರು. ಈ ವೇಳೆ ಅವರ ೧೧ನೇ ದಿನದ ಕಾರ್ಯಕ್ಕೆ ಆಗಮಿಸಿದ್ದ ಹೇಮಾ ಚೌಧರಿ ಅವರು, ವಿನೋದ್‌ ರಾಜ್‌ಗೆ ಸಾಂತ್ವನ ಹೇಳಿದ್ದರು.

 

Share Post