BengaluruCinemaHealth

ಹಿರಿಯ ನಟಿ ಲೀಲಾವತಿ ಇನ್ನಿಲ್ಲ; ಗಣ್ಯರ ಕಂಬನಿ

ಬೆಂಗಳೂರು; 600ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದ ಹಿರಿಯ ನಟಿ ಲೀಲಾವತಿ ವಯೋಸಹಜ ಕಾಯಿಲೆಯಿಂದ ಸಾವನ್ನಪ್ಪಿದ್ದಾರೆ. ನೆಲಮಂಗಲದ ಸೋಲದೇವನಹಳ್ಳಿಯ ತೋಟದ ಮನೆಯಲ್ಲಿ ಲೀಲಾವತಿಯವರು ಇಹಲೋಕ ತ್ಯಜಿಸಿದ್ದಾರೆ. ಲೀಲಾವತಿಯವರಿಗೆ 86 ವರ್ಷ ವಯಸ್ಸಾಗಿತ್ತು.

ಡಾ.ರಾಜ್‌ಕುಮಾರ್‌, ವಿಷ್ಣವರ್ದನ್‌ ಸೇರಿದಂತೆ ಖ್ಯಾತ ನಟರ ಜೊತೆ ಲೀಲಾವತಿಯವರು ನಟಿಸಿದ್ದರು. ಪುತ್ರ ಹಾಗೂ ನಟ ವಿನೋದ್‌ ರಾಜ್‌ ಅವರನ್ನು ಲೀಲಾವತಿ ಅಗಲಿದ್ದಾರೆ. ಸೋಲದೇವನಹಳ್ಳಿಯಲ್ಲಿ ಉಚಿತವಾಗಿ ಆರೋಗ್ಯ ಕೇಂದ್ರ ಹಾಗೂ ಪಶು ಆರೋಗ್ಯ ಕೇಂದ್ರವನ್ನು ಸ್ಥಾಪನೆ ಮಾಡಿದ್ದರು. ಹಲವಾರು ಸಾಮಾಜಿಕ ಕೆಲಸಗಳನ್ನು ಲೀಲಾವತಿ ಮಾಡುತ್ತಿದ್ದರು. ಪ್ರವಾಹ ಬಂದ ಸಂದರ್ಭದಲ್ಲೂ ಲಕ್ಷಾಂತರ ರೂಪಾಯಿ ನೆರವು ನೀಡಿದ್ದರು.

ಸಿನಿಮಾದಿಂದ ದೂರವಾದ ಮೇಲೆ ಅಮ್ಮ-ಮಗ ಸೋಲದೇವಹಳ್ಳಿಯಲ್ಲಿ ತೋಟ ಮಾಡಿಕೊಂಡಿದ್ದರು. ಕೃಷಿ ಕೆಲಸ ಮಾಡಿಕೊಂಡು ತಮ್ಮ ಪಾಡಿಗೆ ತಾವಿದ್ದರು. ಇತ್ತೀಚೆಗೆ ಕೆಲ ದಿನಗಳಿಂದ ಅವರ ಆರೋಗ್ಯ ಹದಗೆಟ್ಟಿತ್ತು. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್‌, ಶಿವರಾಜ್​ಕುಮಾರ್​, ಗೀತಾ ಶಿವರಾಜ್​ಕುಮಾರ್​, ದರ್ಶನ್​, ಅಭಿಷೇಕ್​ ಅಂಬರೀಷ್​, ಅರ್ಜುನ್​ ಸರ್ಜಾಮುಂತಾದ ಗಣ್ಯರು ಅವರ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದರು.

 

Share Post