CinemaHealth

ತೆಲುಗಿನ ಹಿರಿಯ ನಟ ಚಂದ್ರಮೋಹನ್‌ ಹೃದಯಾಘಾತದಿಂದ ನಿಧನ

ಹೈದರಾಬಾದ್‌; ತೆಲುಗಿನ ಖ್ಯಾತ ಪೋಷಕ ನಟ ಚಂದ್ರಮೋಹನ್‌ ಅವರು ಇಂದು ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಚಂದ್ರಮೋಹನ್‌ ಅವರನ್ನು ಅಪೋಲೋ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಗ್ಗೆ 9.45ರ ಸುಮಾರಿಗೆ ನಿಧನರಾಗಿದ್ದಾರೆ.

ಚಂದ್ರಮೋಹನ್‌ ಅವರಿಗೆ 82 ವರ್ಷ ವಯಸ್ಸಾಗಿತ್ತು. ಅವರು ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಸೋಮವಾರ ಹೈದರಾಬಾದ್‌ನಲ್ಲಿ ಅಂತಿ ವಿಧಿವಿಧಾನಗಳು ನಡೆಯಲಿವೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಚಂದ್ರಮೋಹನ್‌ ಅವರು ಪೋಷಕ ಪಾತ್ರದಲ್ಲಿ ನೂರಾರು ಸಿನಿಮಾಗಳನ್ನು ಮಾಡಿದ್ದಾರೆ. ಖ್ಯಾತ ನಟರ ಜೊತೆ ತೆರೆ ಹಂಚಿಕೊಂಡಿದ್ದಾರೆ. ಅವರ ಅಗಲಿಕೆ ಹಲವಾರು ಗಣ್ಯರು ಕಂಬನಿ ಮಿಡಿದಿದ್ದಾರೆ.

 

Share Post