ಧೋನಿ, ಶಿಲ್ಪಾ ಶೆಟ್ಟಿ ಹೆಸ್ರಲ್ಲಿ ನಕಲಿ ಕ್ರೆಡಿಟ್ ಕಾರ್ಡ್; ವಂಚಕರು ಅರೆಸ್ಟ್
ನವದೆಹಲಿ; ಖ್ಯಾತ ನಟ, ನಟಿಯರು ಹಾಗೂ ಕ್ರಿಕೆಟಿಗರ ದಾಖಲೆಗಳನ್ನು ಕದ್ದು ಕ್ರೆಡಿಟ್ ಕಾರ್ಡ್ಗಳನ್ನು ಪಡೆದು ವಂಚಿಸುತ್ತಿದ್ದ ಜಾಲವನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಐವರು ಆರೋಪಿಗಳನ್ನು ಬಂಧಿಸಲಾಗಿದ್ದು, ಅವರು ನಕಲಿ ಕ್ರೆಡಿಟ್ ಕಾರ್ಡ್ಗಳನ್ನು ಬಳಸಿ ಐವತ್ತು ಲಕ್ಷ ರೂಪಾಯಿ ವಂಚನೆ ಮಾಡಿದ್ದರು ಎಂದು ಗೊತ್ತಾಗಿದೆ.
ಮಹೇಂದ್ರ ಸಿಂಗ್ ಧೋನಿ, ಅಭಿಷೇಕ್ ಬಚ್ಚನ್, ಶಿಲ್ಪಾ ಶೆಟ್ಟಿ, ಮಾಧುರಿ ದೀಕ್ಷಿತ್, ಇಮ್ರಾನ್ ಹಶ್ಮಿ ಸೇರಿದಂತೆ ಹಲವರ ಹೆಸರಿನಲ್ಲಿ ಪುಣೆ ಮೂಲದ ಫಿನ್ಟೆಕ್ ಸ್ಟಾರ್ಟ್ಅಪ್ ‘ಒನ್ ಕಾರ್ಡ್’ನಿಂದ ಕ್ರೆಡಿಟ್ ಕಾರ್ಡ್ಗಳನ್ನು ಪಡೆದು ವಂಚಿಸಿದ್ದಾರೆ. ಜಾಲತಾಣಗಳಲ್ಲಿ ಲಭ್ಯವಿರುವ ನಟರು ಹಾಗೂ ಕ್ರಿಕೆಟಿಗರ ಜಿಎಸ್ಟಿ ಗುರುತಿನ ಸಂಖ್ಯೆ ಮೂಲಕ ಪ್ಯಾನ್ ಕಾರ್ಡ್ ವಿವರಗಳನ್ನು ಪಡೆದುಕೊಂಡು ಈ ವಂಚನೆ ನಡೆಸಲಾಗುತ್ತಿತ್ತು ಎಂದು ತಿಳಿದುಬಂದಿದೆ.
ಬಂಧಿತರನ್ನು ಸುನಿಲ್ ಕುಮಾರ್, ಮೊಹಮದ್ ಆಸಿಫ್, ಪುನೀತ್, ಪಂಕಜ್, ವಿಶ್ವ ಭಾಸ್ಕರ್ ಶರ್ಮಾ ಎಂದು ಗುರುತಿಸಲಾಗಿದೆ.
‘ವಿ