ಬ್ಯಾನರ್ ಕಟ್ಟುವಾಗ ವಿದ್ಯುತ್ ಶಾಕ್; ಮೂವರು ನಟ ಯಶ್ ಅಭಿಮಾನಿಗಳ ದುರ್ಮರಣ
ಗದಗ; ಇಂದು ರಾಕಿಂಗ್ ಯಶ್ ಹುಟ್ಟುಹಬ್ಬ. ಈ ಹಿನ್ನೆಲೆಯಲ್ಲಿ ಬ್ಯಾನರ್ ಕಟ್ಟಲು ಹೋಗಿದ್ದ ಮೂವರು ಅಭಿಮಾನಿಗಳಿಗೆ ವಿದ್ಯುತ್ ಸ್ಪರ್ಶವಾಗಿ ಮೃತಪಟ್ಟಿದ್ದಾರೆ ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲ್ಲೂಕು ಸೂರಣಗಿ ಗ್ರಾಮದಲ್ಲಿ ಈ ದುರಂತ ನಡೆದಿದೆ.
ಮುರಳಿ ನಡವಿನಮನಿ (20), ಹನಮಂತ ಹರಿಜನ (21), ನವೀನ್ ಗಾಜಿ (19) ಮೃತ ದುರ್ದೈವಿಗಳು. ಮಂಜುನಾಥ್ ಹರಿಜನ, ದೀಪಕ್ ಹರಿಜನ, ಪ್ರಕಾಶ್ ಮ್ಯಾಗೇರಿ ಎಂಬ ಯುವಕರಿಗೂ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲಾಗಿದೆ.
ನೀಲಗಿರಿ ಕಟ್ಟಿಗೆಗೆ ಬ್ಯಾನರ್ ಕಟ್ಟಿ, ಅದನ್ನು ಮೇಲೆತ್ತುವಾಗ ಈ ದುರ್ಘಟನೆ ನಡೆದಿದೆ. ಇದರಿಂದಾಗ ಗ್ರಾಮದಲ್ಲಿ ಸೂತಕದ ಛಾಯೆ ಆವರಿಸಿದೆ.