CrimeDistricts

ಕಾರಿನಲ್ಲಿ 8 ಕೋಟಿ ರೂ. ನಗದು ಪತ್ತೆ

ಚಿತ್ರದುರ್ಗ; ದಾಖಲೆ ಇಲ್ಲದೆ ಸಾಗಿಸುತ್ತಿದ್ದ 8 ಕೋಟಿ  ರೂಪಾಯಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಚಿತ್ರದುರ್ಗ ಜಿಲ್ಲೆ  ಹೊಳಲ್ಕೆರೆ ತಾಲೂಕಿನ ಮಲ್ಲಾಡಿಹಳ್ಳಿ ಬಳಿ ಈ ಘಟನೆ ನಡೆದಿದೆ. ಚಿತ್ರದುರ್ಗದಿಂದ ಶಿವಮೊಗ್ಗದತ್ತ ತೆರಳುತ್ತಿದ್ದ ಕಾರಿನಲ್ಲಿ ಈ ಹಣ ಸಿಕ್ಕಿದ್ದು, ಅಡಕೆ ವರ್ತಕರೊಬ್ಬರಿಗೆ ಸೇರಿದ ಹಣ ಎಂದು ಹೇಳಲಾಗುತ್ತಿದೆ.

ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಹಣವನ್ನು ಹೊಳಲ್ಕೆರೆ ಪೊಲೀಸರು ಜಪ್ತಿ ಮಾಡಿದ್ದಾರೆ. ಕಾರು ಚಾಲಕ ಸಚಿನ್ ಎಂಬವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದರು.

Share Post