Crime

ಕೆಲಸ ಕೊಡಿಸುವ ಆಸೆ ತೋರಿಸಿ ಮಹಿಳೆ ಮೇಲೆ ಅತ್ಯಾಚಾರ

ನವದೆಹಲಿ; ಪತಿಯಿಂದ ದೂರವಾಗಿದ್ದ ಮಹಿಳೆಗೆ ಕೆಲಸದ ಆಸೆ ತೋರಿಸಿ, ರೈಲ್ವೆ ಇಲಾಖೆಯ ಸಿಬ್ಬಂದಿ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ದೆಹಲಿಯಲ್ಲಿ ನಡೆದಿದೆ.

ಗುರುವಾರ ತಡರಾತ್ರಿ ದೆಹಲಿಯ ರೈಲ್ವೆ ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಇಬ್ಬರು ವಿದ್ಯುತ್ ನಿರ್ವಹಣಾ ಸಿಬ್ಬಂದಿ ಮಹಿಳೆ ಮೇಲೆ ಅತ್ಯಾಚಾರವೆಸಗಿದ್ದಾರೆ. ಇದೀಗ ಆರೋಪಿಗಳ ವಿರುದ್ಧ ಪೊಲೀಸರು ಎಫ್‍ಐಆರ್ ದಾಖಲಿಸಿದ್ದು, ಕೊಠಡಿಯ ಹೊರಗೆ ಕಾವಲು ಕಾಯುವ ಮೂಲಕ ಕೃತ್ಯಕ್ಕೆ ಸಹಕಾರ ನೀಡಿದ ಮತ್ತಿಬ್ಬರನ್ನು ಕೂಡ ಬಂಧಿಸಲಾಗಿದೆ.

Share Post