BengaluruCrime

ಫ್ಲೈಓವರ್‌ನಲ್ಲಿ ಬೈಕ್‌ ಡಿಕ್ಕಿ; ಯುವತಿ ಸಾವು

ಬೆಂಗಳೂರು; ಕೆಟಿಎಂ ಬೈಕ್ ಡಿಕ್ಕಿ ಹೊಡೆದು ಯುವತಿ ಸಾವನ್ನಪ್ಪಿರುವ ಘಟನೆ ಎಲೆಕ್ಟ್ರಾನಿಕ್ ಸಿಟಿ ಎಲಿವೇಟೆಡ್ ಫ್ಲೈಓವರ್ ರಸ್ತೆಯಲ್ಲಿ ನಡೆದಿದೆ. ಶುಭಶ್ರೀ(28)ಎಂಬ ಯುವತಿ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಎಲೆಕ್ಟ್ರಾನಿಕ್ ಸಿಟಿ ಸಮೀಪದ ಗೊಲ್ಲಹಳ್ಳಿಯ ಅವನಿ ಅಲೈನ್ ಅಪಾರ್ಟ್ ಮೆಂಟ್ ನಿವಾಸಿಯಾದ ಇವರು ಸ್ನೈಡರ್ ಕಂಪನಿಯಲ್ಲಿ ಮಾರ್ಕೆಟಿಂಗ್ ಕೆಲಸ ಮಾಡುತ್ತಿದ್ದರು. ಶುಭಶ್ರೀ ನಿನ್ನೆ ರಾತ್ರಿ ರಾಯಲ್ ಎನ್ ಫೀಲ್ಡ್ ಬುಲೆಟ್‌ನಲ್ಲಿ ಹಿಂಬದಿ ಕುಳಿತು ಸಂಚರಿಸುತ್ತಿರುವಾಗ ಹಿಂಬದಿಯಿಂದ ಅತಿವೇಗವಾಗಿ ಬಂದ ಕೆಟಿಎಮ್ ಬೈಕ್ ಸವಾರ ರಾಯಲ್ ಎನ್ ಫೀಲ್ಡ್ ಬುಲೆಟ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಹಿಂಬದಿಯಲ್ಲಿ ಕುಳಿತಿದ್ದ ಶುಭಶ್ರೀ ರಸ್ತೆಯ ಮೇಲೆ ಬಿದ್ದು ತಲೆಗೆ ಗಂಭೀರ ಗಾಯವಾಗಿತ್ತು. ತಕ್ಷಣ ಚಿಕಿತ್ಸೆಗಾಗಿ ಹತ್ತಿರದ ಕಾವೇರಿ ಆಸ್ಪತ್ರೆಗೆ ರವಾನೆ ಮಾಡಿದರಾದರೂ ದಾರಿಯಲ್ಲೆ ಶುಭಶ್ರೀ ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದರು.

ಅಪಘಾತ ನಡೆಸಿದ ಕೆಟಿಎಮ್ ಬೈಕ್ ಸವಾರ ವಿಮಲ್ ಚಂದ್ರ ಮೋಹನ್(30) ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಅತಿವೇಗ ಹಾಗೂ ಅಜಾಗರೂಕತೆಯ ಚಾಲನೆಯೇ ಘಟನೆ ಕಾರಣ ಎನ್ನಲಾಗಿದೆ. ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

Share Post