ಭ್ರೂಣ ಹತ್ಯೆ ಪ್ರಕರಣ; ವೈದ್ಯ ನಿಗೂಢವಾಗಿ ಸಾವು!
ಮಡಿಕೇರಿ: ಮೈಸೂರು ಜಿಲ್ಲೆ ಕೊಣಸೂರು ಸರ್ಕಾರಿ ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದ ಮೇಲೆ ವೈದ್ಯರಾಗಿ ಕಾರ್ಯನಿರ್ವಹಿಸುತ್ತಿದ್ದ ಡಾ. ಸತೀಶ್ ಅವರು ಕೊಡಗಿನ ಕುಶಾಲನಗರ ತಾಲೂಕಿನ ಆನೆಕಾಡು ರಾಷ್ಟ್ರೀಯ ಹೆದ್ದಾರಿ ಬದಿ ನಿಂತಿದ್ದ ಕಾರಿನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ಡಾ. ಸತೀಶ್ (47) ಮಂಡ್ಯ ಜಿಲ್ಲೆ ಪಾಂಡವಪುರ ಬಳಿಯ ಶಿವಳ್ಳಿ ಗ್ರಾಮದ ನಿವಾಸಿಯಾಗಿದ್ದಾರೆ. ಇತ್ತೀಚೆಗೆ ಬೆಳಕಿಗೆ ಬಂದ 900 ಭ್ರೂಣ ಹತ್ಯೆ ಪ್ರಕರಣದಲ್ಲಿ ಅವರ ಹೆಸರು ಸಹ ಕೇಳಿಬಂದಿತ್ತು. ಇನ್ನು ಬಂಧಿತ ಆರೋಪಿಗಳು ವಿಚಾರಣೆ ವೇಳೆ ಸತೀಶ್ ಅವರ ಹೆಸರು ಹೇಳಿದ್ದರು ಎನ್ನಲಾಗಿದೆ. ಅಲ್ಲದೆ ಭ್ರೂಣ ಹತ್ಯೆ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ವೈದ್ಯ ಸತೀಶ್ ತಲೆಮರೆಸಿಕೊಂಡಿದ್ದರು.