CrimeDistricts

ಮಗು ಹೆತ್ತ 10ನೇ ತರಗತಿ‌ ವಿದ್ಯಾರ್ಥಿನಿ; ಸಹೋದರನೇ ಕಾರಣ

ಕಲಬುರಗಿ; ಹತ್ತನೇ ತರಗತಿ ಓದುತ್ತಿದ್ದ ಅಪ್ರಾಪ್ತ ಬಾಲಕಿಯೊಬ್ಬಳು ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ಇದಕ್ಕೆ ಸಹೋದರನೇ ಕಾರಣವೆಂದು ತಿಳಿದುಬಂದಿದೆ. ಕಲಬುರಗಿ ಜಿಲ್ಲೆ ನಿಂಬರ್ಗಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

 

ಬಾಲಕು ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಓದುತ್ತಿದ್ದಳು. ಅವರು ಈ ಗಮನಿಸದ ಹಿನ್ನೆಲೆಯಲ್ಲಿ ಶಾಲೆಯ ಪ್ರಾಚಾರ್ಯ ಹಾಗೂ ನಿಲಯ ಪಾಲಕನನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.

 

 ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿ 10ನೇ ತರಗತಿ ಓದುತ್ತಿದ್ದಳು. ಆಕೆಗೆ ತೀವ್ರ ಹೊಟ್ಟೆನೋವು ಕಾಣಿಸಿಕೊಂಡಿತ್ತು. ಹೀಗಾಗಿ ಕೂಡಲೇ ಆಕೆಯ ಪೋಷಕರಿಗೆ ವಿಚಾರ ತಿಳಿಸಲಾಯಿತು. ಪೋಷಕರು ಆಕೆಯನ್ನು ಸೊಲ್ಲಾಪುರದ ಖಾಸಗಿ ಆಸ್ಪತ್ರೆಗೆ ಸೇರಿಸಿದ್ದರು. ಅಲ್ಲಿ ಬಾಲಕಿ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ಡಿಸೆಂಬರ್ 28ರಂದೇ ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

 

ಇದಕ್ಕೆ ಕಾರಣ ಬಾಲಕಿಯ ದೊಡ್ಡಪ್ಪನ ಮಗನೇ ಎಂದು ತಿಳಿದುಬಂದಿದೆ. ಆರೋಪಿಯನ್ನು ಬಂಧಿಸಲಾಗಿದೆ. ನಿಂಬರ್ಗಾ ಠಾಣೆಯಲ್ಲಿ ಪೋಕ್ಸೋ ಕೇಸಿನಡಿ ಪ್ರಕರಣ ದಾಖಲಾಗಿದೆ.

 

Share Post