BengaluruCrime

ರಾಮೇಶ್ವರಂ ಕೆಫೆ ಪ್ರಕರಣ; ಕೇಸ್ ದಾಖಲಿಸಿಕೊಂಡ NIA

ಬೆಂಗಳೂರು; ಮೂರು ದಿನಗಳಾಯ್ತು ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ ಸಂಭವಿಸಿ. ಆದ್ರೆ ಇದುವರೆಗೆ ಆರೋಪಿ ಪತ್ತೆಯಾಗಿಲ್ಲ. ಸದ್ಯಕ್ಕೆ ಸಿಸಿಬಿ ಪೊಲೀಸರು 8 ತಂಡಗಳಾಗಿ ಶೋಧ ನಡೆಸುತ್ತಿದ್ದಾರೆ. ಆದರೂ ತನಿಖೆಯಲ್ಲಿ ಪ್ರಗತಿ ಕಂಡಿಲ್ಲ. ಈ ನಡುವೆ ಪ್ರಕರಣದ ಗಂಭೀರತೆ ಅರಿತ ಎನ್ ಐ ಎ ಕೂಡಾ ಕೇಸ್ ದಾಖಲಿಸಿಕೊಂಡಿದ್ದು, ತನಿಖೆಗೆ ಮುಂದಾಗಿದೆ.

  ಶುಕ್ರವಾರ ಮಧ್ಯಾಹ್ನ ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ ಸಂಭವಿಸಿತ್ತು. ಘಟನೆಯಲ್ಲಿ 9 ಮಂದಿ ಗಾಯಗೊಂಡಿದ್ದರು. ಬಸ್ ನಲ್ಲಿ ಬಂದಿದ್ದ ವ್ಯಕ್ತಿಯೊಬ್ಬ ಬಾಂಬ್ ಇದ್ದ ಬ್ಯಾಗ್ ಇಟ್ಟು ಹೋಗಿದ್ದ. ಆತನ ಚಹರೆ ಸಿಸಿಟಿವಿಯಲ್ಲಿ ಸೆರೆಯಾಗಿದ್ದರೂ ಕೂಡಾ ಇನ್ನೂ ಆರೋಪಿ ಸಿಕ್ಕಿಲ್ಲ. ಆತ ಪಕ್ಕದ ರಾಜ್ಯಕ್ಕೆ ಎಸ್ಕೇಪ್ ಆಗಿರುವ ಸಾಧ್ಯತೆ ಇದೆ. ಪ್ರೀ ಪ್ಲ್ಯಾನ್ ಮಾಡಿ ಸ್ಫೋಟ ನಡೆಸಿರುವ ಸಾಧ್ಯತೆ ಇದೆ. ಹೀಗಾಗಿ ಆರೋಪಿಯ ಸುಳಿವು ಸಿಕ್ಕಿಲ್ಲ. ಹೀಗಾಗಿ ಪೊಲೀಸರು ಆರೋಪಿಯ ರೇಖಾ ಚಿತ್ರ ಬಿಡುಗಡೆಗೆ ಸಿದ್ಧತೆ ನಡೆಸಿದ್ದಾರೆ.

ಇನ್ನು ನಿನ್ನೆ ಭಾನುವಾರ  ಸಿಸಿಬಿ ಪೊಲೀಸರು ರಾಮೇಶ್ವರಂ ಕೆಫೆಯಲ್ಲಿ ಸ್ಥಳ ಮಹಜರು ನಡೆಸಿದರು. ಸಿಸಿಬಿ ತನಿಖಾಧಿಕಾರಿ ನವೀನ್ ಕುಲಕರ್ಣಿ ಮತ್ತು ತಂಡ,  ಕೆಫೆಯ ಮ್ಯಾನೇಜರ್‌ ಹಾಗೂ ಸಿಬ್ಬಂದಿಯ ಸಮ್ಮುಖದಲ್ಲಿ ಸ್ಥಳ  ಲಮಹಜರು ನಡೆಸಿದರು. ಬಾಂಬರ್‌ ಎಂಟ್ರಿಯಾದ ಸ್ಥಳ, ಓಡಾಡಿದ್ದ ಸ್ಥಳದ ಪರಿಶೀಲನೆ ನಡೆಸಿ, ಮಾಹಿತಿ ಸಂಗ್ರಹಿಸಿದರು.

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಈ‌‌ ಹಿಂದೆ ನಡೆದ ಹಲವು ಸ್ಫೋಟಗಳಿಗೆ ಸಾಮ್ಯತೆ ಇದೆ. ರಾಜ್ಯದಲ್ಲಿ 10 ವರ್ಷಗಳಲ್ಲಿ 3 ಪ್ರಮುಖ ಸ್ಫೋಟಗಳು ಸಂಭವಿಸಿದ್ದು, ಎಲ್ಲದಕ್ಕೂ ಒಂದೇ ರೀತಿಯ ವಸ್ತುಗಳ ಬಳಕೆಯಾಗಿವೆ. ಈ ಮೂರೂ ಪ್ರಕರಣಗಳಲ್ಲಿ ಒಬ್ಬನೇ ಭಾಗಿಯಾಗಿರಬಹುದೇ ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತದೆ.

 

Share Post