CrimeNational

ಶಿವಕಾಶಿ ಪಟಾಕಿ ಫ್ಯಾಕ್ಟರಿಯಲ್ಲಿ‌ ಅಗ್ನಿ ದುರಂತ; 8 ಮಂದಿ ದುರ್ಮರಣ

ಶಿವಕಾಶಿ; ತಮಿಳುನಾಡಿನಲ್ಲಿ ಮತ್ತೊಂದು ಪಟಾಕಿ ದುರಂತ ನಡೆದಿದೆ.. ಶಿವಕಾಶಿ ಸಮೀಪದ ಸೆಂಗಮಲಪಟ್ಟಿ ಎಂಬಲ್ಲಿಯ ಪಟಾಕಿ ತಯಾರಿಕಾ ಘಟಕವೊಂದರಲ್ಲಿ ಸ್ಫೋಟ ಸಂಭವಿಸಿದೆ..

  ಈ ದುರಂತದಲ್ಲಿ ಎಂಟು ಕಾರ್ಮಿಕರು ಸಾವನ್ನಪ್ಪಿದ್ದು, 10 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.. ಎಲ್ಲರಿಗೂ ಶಿವಕಾಶಿ ಸರ್ಕಾರಿ ಆಸ್ಪತ್ರೆಯಲ್ಲಿ‌ ಚಿಕಿತ್ಸೆ ನೀಡಲಾಗುತ್ತಿದೆ..

   ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.. ಇದೀಗ ಪಟಾಕಿ ಕಾರ್ಖಾನೆಯಲ್ಲಿನ ಬೆಂಕಿಯನ್ನು ನಂದಿಸಲಾಗುತ್ತಿದೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ವಿರುದುನಗರ ಜಿಲ್ಲೆಯ ಶಿವಕಾಶಿಯಲ್ಲಿ ನಿರ್ಜನ ಸ್ಥಳದಲ್ಲಿ ಈ ಪಟಾಕಿ ಕಾರ್ಖಾನೆ ಇದೆ.

Share Post