CrimeNational

ಬಸ್ಸು-ಕಾರಿನ ನಡುವೆ ಭೀಕರ ಅಪಘಾತ; 11 ಮಂದಿ ದಾರುಣ ಸಾವು..!

ಬೆತುಲ್; ಮಧ್ಯಪ್ರದೇಶದಲ್ಲಿ ಇಂದು ಮಧ್ಯರಾತ್ರಿ ಭೀಕರ ಅಪಘಾತ ಸಂಭವಿಸಿದ್ದು, 11 ಮಂದಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ಬೆತುಲ್‌ ಜಿಲ್ಲೆಯಲ್ಲಿ ಬಸ್‌ ಹಾಗೂ ಕಾರು ಡಿಕ್ಕಿಯಾಗಿ ದುರಂತ ಸಂಭವಿಸಿದೆ.

ಮಧ್ಯಪ್ರದೇಶದ ಬೆತುಲ್‌ ಜಿಲ್ಲಾ ಕೇಂದ್ರದಿಂದ 35 ಕಿಲೋ ಮೀಟರ್‌ ದೂರದಲ್ಲಿರುವ ಭೈನ್ಸ್‌ದೇಹಿ ರಸ್ತೆಯಲ್ಲಿ ಕಳೆದ ತಡರಾತ್ರಿ ಎರಡು ಗಂಟೆ ಸುಮಾರಿಗೆ ಈ ಭೀಕರ ಆಕ್ಸಿಡೆಂಟ್‌ ಸಂಭವಿಸಿದೆ. ಇಬ್ಬರು ಮಕ್ಕಳು, ಆರು ಮಂದಿ ಪುರುಷರು ಹಾಗೂ ಮೂವರು ಮಹಿಳೆಯರು ಸಾವನ್ನಪ್ಪಿದ್ದಾರೆ. ಕಾರು ಚಾಲಕ ನಿದ್ರೆ ಮಂಪರಿನಲ್ಲಿದ್ದುದೇ ಈ ದುರಂತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ಮೃತರೆಲ್ಲರೂ ಕಾರ್ಮಿಕರಾಗಿದ್ದು, ಮಹಾರಾಷ್ಟ್ರದ ಅಮರಾವತಿಯಿಂದ ಸ್ವಗ್ರಾಮಗಳಿಗೆ ಆಗಮಿಸುತ್ತಿದ್ದರು ಎಂದು ಹೇಳಲಾಗುತ್ತಿದೆ.

Share Post