ಆಸ್ಪತ್ರೆಯ ಬಯೋಗ್ಯಾಸ್ ಪ್ಲಾಂಟ್‌ನಲ್ಲಿ 11 ತಲೆಬುರುಡೆಗಳು ಪತ್ತೆ..!
ಮುಂಬೈ: ವಾರ್ಧಾದ ಆರ್ವಿಯಲ್ಲಿರುವ ಖಾಸಗಿ ಆಸ್ಪತ್ರೆಯ ಬಯೋಗ್ಯಾಸ್ ಪ್ಲಾಂಟ್‌ನಲ್ಲಿ 11 ತಲೆಬುರುಡೆಗಳು ಹಾಗೂ 54 ಮೂಳೆಗಳು ಪತ್ತೆಯಾಗಿವೆ. ಆಸ್ಪತ್ರೆಯಲ್ಲಿ ಸಾವನ್ನಪ್ಪಿದವರನ್ನು ಬಯೋಗ್ಯಾಸ್ ಪ್ಲಾಂಟ್‌ನಲ್ಲಿ ಹಾಕಿರಬಹುದು ಎಂದು ಶಂಕಿಸಲಾಗಿದೆ. ಈ ಸಂಬಂಧ ಆಸ್ಪತ್ರೆಯ ನಿರ್ದೇಶಕಿ ರೇಖಾ ಹದಮ್ ಹಾಗೂ ಅವರ ಸಹಚರರೊಬ್ಬರನ್ನು ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.
ಆಸ್ಪತ್ರೆಯಲ್ಲಿ ಅಕ್ರಮವಾಗಿ ಅಬಾರ್ಷನ್ ಮಾಡುತ್ತಿದ್ದಾರೆಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ಆಸ್ಪತ್ರೆ ಮೇಲೆ ದಾಳಿ ನಡೆಸಿ, ಪರಿಶೀಲನೆ ಮಾಡಿದ್ದರು. ಈ ವೇಳೆ ಬಯೋಗ್ಯಾಸ್ ಪ್ಲಾಂಟ್‌ನಲ್ಲಿ ತಲೆಬುರುಡೆಗಳು ಹಾಗೂ ಮೂಳೆಗಳು ಪತ್ತೆಯಾಗಿವೆ.
ತಲೆಬುರುಡೆ, ಮೂಳೆಗಳು ಪತ್ತೆಯಾಗಿರುವುದರಿಂದ ಸ್ಥಳೀಯರಲ್ಲಿ ಆತಂಕ ಎದುರಾಗಿದೆ. ಆಸ್ಪತ್ರೆಯಲ್ಲಿ ಇಷ್ಟೆಲ್ಲಾ ನಡೆಯುತ್ತಿದ್ದವಾ ಎಂದು ಜನ ಮಾತಾಡಿಕೊಳ್ಳುತ್ತಿದ್ದಾರೆ.