ಪ್ರಜ್ವಲ್ ರೇವಣ್ಣಗೆ 14 ದಿನ ನ್ಯಾಯಾಂಗ ಬಂಧನ; ಜೈಲು ಪಾಲಾದ ಮಾಜಿ ಸಂಸದ!
ಬೆಂಗಳೂರು; ಮಾಜಿ ಸಂಸದ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಪ್ರಜ್ವಲ್ ರೇವಣ್ಣ ಜೈಲು ಪಾಲಾಗಿದ್ದಾರೆ.. ಇಂದು ವಿಚಾರಣೆಗೆ ನಡೆಸಿದ ಕೋರ್ಟ್ ಪ್ರಜ್ವಲ್ ರೇವಣ್ಣಗೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ..
ಇಂದು ಎಸ್‌ಐಟಿ ಕಸ್ಟಡಿ ಮುಗಿದಿತ್ತು.. ಈ ಹಿನ್ನೆಲೆಯಲ್ಲಿ ಎಸ್‌ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣನನ್ನು ಕೋರ್ಟ್‌ಗೆ ಹಾಜರುಪಡಿಸಿದ್ದರು. ಕೋರ್ಟ್ ೧೪ ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.. ಇಂದು ಬಸವನಗುಡಿಯ ಮನೆಯಲ್ಲಿ ಮಹತ್ವದ ಸ್ಥಳ ಮಹಜರು ಮಾಡಲಾಗಿದೆ..
ಪ್ರಜ್ವಲ್ ರೇವಣ್ಣ ವಿರುದ್ಧ ಆರೋಪ ಮಾಡಿರುವ ಸಂತ್ರಸ್ಥೆ ಹೇಳಿಕೆ ಮೇರೆಗೆ ಎಸ್‌ಐಟಿ ಅಧಿಕಾರಿಗಳು ಸಾಕ್ಷ್ಯಗಳನ್ನು ಕಲೆ ಹಾಕಿದ್ದಾರೆ. ಬಸವನಗುಡಿ ಮನೆಯಲ್ಲಿ ಮಹಜರು ನಡೆಸುವಾಗ ಎಸ್ಐಟಿ ತಂಡ ಕೆಲ ವಸ್ತುಗಳನ್ನು ಎವಿಡೆನ್ಸ್ ಆಗಿ ಪರಿಗಣಿಸಿದೆ ಎಂದು ಹೇಳಲಾಗುತ್ತಿದೆ..