CrimeNational

ಭೋಪಾಲ್‌ ಬಳಿ ಭೀಕರ ಅಪಘಾತ; 14 ಮಂದಿ ದಾರುಣ ಸಾವು

ಭೋಪಾಲ್; ಮಧ್ಯಪ್ರದೇಶದ ರೇವಾ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಹಬ್ಬಕ್ಕೆಂದು ಮನೆಗೆ ಹೋಗುತ್ತಿರುವವರು ಮಸಣ ಸೇರಿದ್ದಾರೆ. ಟ್ರಕ್‌ಗೆ ಬಸ್‌ ಡಿಕ್ಕಿ ಹೊಡೆದಿದ್ದು, ಈ ಭೀಕರ ಅಪಘಾತದಲ್ಲಿ 14 ಮಂದಿ ದಾರುಣ ಸಾವನ್ನಪ್ಪಿದ್ದಾರೆ. 40 ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲಾಗಿದೆ.

ಬಸ್‌ ಹೈದರಾಬಾದ್‌ನಿಂದ ಗೋರಖ್‌ಪುರಕ್ಕೆ ತೆರಳುತ್ತಿತ್ತು. ಆದ್ರೆ ಅದು ಮಧ್ಯಪ್ರದೇಶದ ರೇವಾ ಬಳಿ ಬಂದಾಗ ಎದುರಿಗೆ ಬರುತ್ತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದು ದುರಂತಕ್ಕೆ ಕಾರಣವಾಗಿದೆ. ಗಾಯಗೊಂಡ 40 ಮಂದಿಯಲ್ಲಿ 20 ಮಂದಿಗೆ ತೀವ್ರ ಗಾಯಗಳಾಗಿವೆ. ಹೀಗಾಗಿ ಅವರನ್ನು ಪ್ರಯಾಗ್‌ ರಾಜ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್‌ನಲ್ಲಿದ್ದವರೆಲ್ಲರೂ ಉತ್ತರ ಪ್ರದೇಶ ಮೂಲದವರು ಎಂದು ತಿಳಿದುಬಂದಿದೆ.

Share Post