CrimeNational

ಸ್ವಂತ ತಂದೆ-ಚಿಕ್ಕಪ್ಪನಿಂದಲೇ ಬಾಲಕಿ ಮೇಲೆ ಅತ್ಯಾಚಾರ

ಪುಣೆ; ಉತ್ತರ ಪ್ರದೇಶ ಮೂಲದ 17 ವರ್ಷದ ಬಾಲಕಿಯ ಪಾಲಿಗೆ ತಂದೆ ಹಾಗೂ ಚಿಕ್ಕಪ್ಪನೇ ಯಮಕಿಂಕರರಾಗಿದ್ದಾರೆ. ತಂದೆ ಹಾಗೂ ಚಿಕ್ಕಪ್ಪ ಇಬ್ಬರೂ ಸೇರಿ ಅತ್ಯಾಚಾರ ಎಸಗಿದ್ದಾರೆ. ಈ ಸಂಬಂಧ ಬಾಲಕಿ ಪುಣೆ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ.

2016 ರಿಂದ 2018ರವರೆಗೆ ಈ ಅತ್ಯಾಚಾರ ನಡೆದಿದೆ ಎಂದು ಬಾಲಕಿ ದೂರಿನಲ್ಲಿ ತಿಳಿಸಿದ್ದಾಳೆ. ಮನೆಯಲ್ಲಿದ್ದಾಗ ಚಿಕ್ಕಪ್ಪ ಹಾಗೂ ಅಜ್ಜ ಲೈಂಗಿಕ ದೌರ್ಜನ್ಯ ಎಸಗಿದ್ದರು. ಈ ವಿಚಾರ ತಂದೆಗೆ ತಿಳಿಸಿದ್ದೆ. ಆದ್ರೆ ಅಮ್ಮ ಮನೆಯಲ್ಲಿ ಇಲ್ಲದ ಸಮಯದಲ್ಲಿ ತಂದೆಯೂ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಬಾಲಕಿಯ ತಂದೆಯನ್ನು ಪೊಲೀಸರು ಬಂಧಿಸಿದ್ದು, ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.

Share Post