ಎಂಟು ವರ್ಷದಲ್ಲಿ ಎಷ್ಟು ಉಗ್ರರ ಹತ್ಯೆ ಮಾಡಲಾಗಿದೆ ಗೊತ್ತಾ..?
ನವದೆಹಲಿ; ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಎರಡು ಅವಧಿಯಲ್ಲಿ ದೇಶದಲ್ಲಿ ಹಾಗೂ ಗಡಿಯಲ್ಲಿ ಭಯೋತ್ಪಾದಕ ಚಟುವಟಿಕೆಗಳ ಸಂಖ್ಯೆ ಸಾಕಷ್ಟು ಪ್ರಮಾಣದಲ್ಲಿ ಇಳಿಕೆಯಾಗಿದೆ. ದಾಳಿ ನಡೆಸಲು ಸಂಚು ರೂಪಿಸಿದ್ದ ಹಲವಾರು ಪ್ರಕರಣಗಳನ್ನು ಕೂಡಾ ಬೇಧಿಸಲಾಗಿದೆ.
ಕಳೆದ ಎಂಟು ವರ್ಷಗಳಲ್ಲಿ ಅತಿ ಹೆಚ್ಚು ಉಗ್ರರನ್ನು ಬಂಧಿಸಲಾಗಿದೆ. ಇನ್ನು ಈ ಅವಧಿಯಲ್ಲಿ 2132 ಉಗ್ರ ದಾಳಿಗಳು ನಡೆದಿದ್ದು, ಇದರಲ್ಲಿ 1538 ಉಗ್ರರನ್ನು ಕೊಲ್ಲಲಾಗಿದೆ ಎಂದು ಅಂಕಿ ಅಂಶಗಳು ತಿಳಿಸಿವೆ.