Crime

ನೈಸ್‌ ರಸ್ತೆಯಲ್ಲಿ ಭೀಕರ ಅಪಘಾತ : ನಾಲ್ವರ ಸಾವು

ಬೆಂಗಳೂರು : ಬನ್ನೇರುಘಟ್ಟ ಮತ್ತು ತುಮಕೂರು ನಡುವಿನ ನೈಸ್‌ ರಸ್ತೆಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಕ್ವಾಲಿಸ್ ಮತ್ತು ಹಾಗೂ ಲಾರಿ ನಡುವೆ ಡಿಕ್ಕಿ ಆಗಿದ್ದು ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿದ್ದಾರೆ. ಶುಕ್ರವಾರ ತಡರಾತ್ರಿ ಈ ಘಟನೆ ನಡೆದಿದೆ.

ಸಾವನ್ನಪ್ಪಿದವರ ಬಗ್ಗೆ ಹೆಚ್ಚೇನು ಮಾಹಿತಿ ಲಭ್ಯವಾಗಿಲ್ಲ ಆದರೆ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಹಿಸಲಾಗಿದೆ. ಕುಮಾರಸ್ವಾಮಿ ಲೇಔಟ್‌ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ಅಪಘಾತದ ತನಿಖೆ ಶುರುಮಾಡಿದ್ದಾರೆ.

ಸಾವನ್ನಪ್ಪಿರುವವರಲ್ಲಿ ಇಬ್ಬರು ಮಹಿಳೆಯರು ಮತ್ತು ಇಬ್ಬರು ಗಂಡಸರು ಎಂದು ತಿಳಿದು ಬಂದಿದೆ. ವೇಗವಾಗಿ ಬಂದು ಡಿಕ್ಕಿ ಹೊಡೆದಿರುವುದೇ ಅಪಘಾತಕ್ಕೆ ಕಾರಣ ಎಂದು ಮೇಲ್ನೋಟಕ್ಕೆ ಕಾಣಿಸುತ್ತಿದೆ ಆದರೂ ಇನ್ನು ಅಧಿಕೃತ ಮಾಹಿತಿ ಹೊರ ಬೀಳಬೇಕಿದೆ.

Share Post