CrimeNational

ದುರ್ಗಾ ಪೆಂಡಾಲ್‌ಗೆ ಬೆಂಕಿ; ಐವರ ದುರ್ಮರಣ

ಲಕ್ನೋ; ದುರ್ಗಾ ಪೂಜೆಗೆ ಹಾಕಿದ್ದ ಪೆಂಡಾಲ್‍ಗೆ ಬೆಂಕಿ ಬಿದ್ದಿದ್ದು, ಮೂವರು ಮಕ್ಕಳು ಸೇರಿದಂತೆ ಐವರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಭದೋಹಿಯಲ್ಲಿ ನಡೆದಿದೆ. ಘಟನೆಯಲ್ಲಿ, 66 ಮಂದಿ ಗಾಯಗೊಂಡಿದ್ದಾರೆ.

ಈ ಕುರಿತಂತೆ ಪ್ರತಿಕ್ರಿಯಿಸಿದ ಮ್ಯಾಜಿಸ್ಟ್ರೇಟ್ ಗೌರಂಗ್ ರಾಠಿ ಅವರು, ಔರೈ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗಾಪೂಜಾ ವೇಳೆ ಅಗ್ನಿ ಅವಘಡ ಸಂಭವಿಸಿದ್ದು, ಒಟ್ಟು 66 ಜನರು ಗಾಯಗೊಂಡಿದ್ದಾರೆ ಎಂದು ಹೇಳಿದ್ದಾರೆ.

Share Post