CrimeInternational

ಟೆಹರಾನ್‌ನಲ್ಲಿ ಗುಂಡಿನ ದಾಳಿ; ಐದು ಮಂದಿ ದಾರುಣ ಸಾವು

ಟೆಹರಾನ್‌; ಇರಾನ್‌ ನ ಟೆಹರಾನ್‌ನಲ್ಲಿ ಭೀಕರ ಗುಂಡಿನ ದಾಳಿ ನಡೆದಿದೆ. ಇಲ್ಲಿನ ಇಝೆಹ್‌ನಲ್ಲಿ ಶಸ್ತ್ರ ಸಜ್ಜಿತ ದುಷ್ಕರ್ಮಿಗಳು ಇದ್ದಕ್ಕಿಂತ ದಾಳಿ ಮಾಡಿದ್ದು, ಘಟನೆಯಲ್ಲಿ ಐದು ಮಂದಿ ದಾರುಣವಾಗಿ ಸಾವನ್ನಪ್ಪಿದ್ದಾರೆ.  10 ಮಂದಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಎರಡು ಬೈಕ್‌ಗಳಲ್ಲಿ ಆಗಮಿಸಿದ ಶಸ್ತ್ರಸಜ್ಜಿತ ದಾಳಿಕೋರರು, ಇಝೆಹ್‌ ಕೇಂದ್ರ ಮಾರುಕಟ್ಟೆಯಲ್ಲಿ ದಾಳಿ ಮಾಡಿದ್ದಾರೆ. ಸಾರ್ವಜನಿಕರ, ಪೊಲೀಸರನ್ನೇ ಗುರಿಯಾಗಿಸಿಕೊಂಡು ಈ ದಾಳಿ ಮಾಡಲಾಗಿದೆ. ದಾಳಿಯಲ್ಲಿ ಮೂವರು ಯುವಕರು,  ಬಾಲಕಿ ಹಾಗೂ ಹಿರಿಯ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ.  ಗಾಯಗೊಂಡವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

 

 

Share Post